ನನ್ನನ್ನು ಮತ್ತೆ ಗೃಹ ಬಂಧನದಲ್ಲಿರಿಸಲಾಗಿದೆ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಗೆ ಭೇಟಿ ನೀಡಲು ಯೋಜಿಸಿದ್ದರಿಂದ ನನಗೆ ಮತ್ತೆ ಗೃಹ ಬಂಧನ ವಿಧಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಬುಧವಾರ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಗೆ ಭೇಟಿ ನೀಡಲು ಯೋಜಿಸಿದ್ದರಿಂದ ನನಗೆ ಮತ್ತೆ ಗೃಹ ಬಂಧನ ವಿಧಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಬುಧವಾರ ಹೇಳಿದ್ದಾರೆ.

ಪುಲ್ವಾಮಾದ ಟ್ರಾಲ್ ಪಟ್ಟಣದಲ್ಲಿ ಕುಟುಂಬದ ಮೇಲೆ ಸೇನಾ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಮತ್ತು ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ನಿನ್ನೆ ಆರೋಪಿಸಿದ್ದರು.  ಅಲ್ಲದೆ ಇಂದು ಹಲ್ಲೆಗೊಳಗಾದ ಕುಟುಂಬವನ್ನು ಭೇಟಿ ಮಾಡುವುದಾಗಿ ಮಫ್ತಿ ಹೇಳಿದ್ದರು.

ಸೈನ್ಯದಿಂದ ಹಲ್ಲೆಗೊಳಗಾದ ಟ್ರಾಲ್ ಗ್ರಾಮಕ್ಕೆ ಭೇಟಿ ನೀಡಲು ಪ್ರಯತ್ನಿಸಿದ್ದಕ್ಕಾಗಿ ಇಂದು ಮತ್ತೆ ನನಗೆ ಮನೆಯಲ್ಲಿ ಬಂಧಿಸಲಾಗಿದೆ. ಇದು ಕಾಶ್ಮೀರದ ನೈಜ ಚಿತ್ರವಾಗಿದ್ದು, ಕೇಂದ್ರ ಸರ್ಕಾರ ಕಣಿವೆಗೆ ಭೇಟಿ ನೀಡುವ ಗಣ್ಯರನ್ನು ತೋರಿಸುವ ಬದಲು ಇದನ್ನು ತೋರಿಸಬೇಕು "ಎಂದು ಮುಫ್ತಿ ಟ್ವೀಟ್ ಮಾಡಿದ್ದಾರೆ.

ಭದ್ರತಾ ಪಡೆಗಳು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆಯ ವಾಹನವನ್ನು ಗುಪ್ಕರ್ ರಸ್ತೆಯಲ್ಲಿರುವ ಅವರ ನಿವಾಸದ ಮುಖ್ಯ ದ್ವಾರದಲ್ಲಿಯೇ ತಡೆದಿದ್ದಾರೆ ಎಂದು ಹೇಳಲಾಗಿದೆ.

"ಟ್ರಾಲ್‌ನ ಯಾಗವಾಣಿ ಶಿಬಿರದ ಸೈನ್ಯವು ನಿನ್ನೆ ರಾತ್ರಿ ಮನೆಗಳಿಗೆ ನುಗ್ಗಿ ನಿರ್ದಯವಾಗಿ ಒಂದು ಕುಟುಂಬವನ್ನು ಥಳಿಸಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಳ್ಳಿಯಲ್ಲಿ ಸೇನಾ ಸಿಬ್ಬಂದಿ ನಾಗರಿಕರ ಮೇಲೆ ಹಲ್ಲೆ ನಡೆಸಿದ್ದು ಇದೇ ಮೊದಲಲ್ಲ ಎಂದು ಮುಫ್ತಿ ನಿನ್ನೆ ಟ್ವೀಟ್ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com