ಪ್ರಶ್ನೆ ಪತ್ರಿಕೆ ಸೋರಿಕೆ, ಅವ್ಯವಹಾರ ಆರೋಪ: ನೀಟ್-ಯುಜಿ ಪರೀಕ್ಷೆ ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಮತ್ತು ಅಕ್ರಮ ನಡೆದಿದೆ. ಹೀಗಾಗಿ ಸೆಪ್ಟೆಂಬರ್ 12, 2021 ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ನೀಟ್-ಯುಜಿ ಆಕಾಂಕ್ಷಿಗಳು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಮತ್ತು ಅಕ್ರಮ ನಡೆದಿದೆ. ಹೀಗಾಗಿ ಸೆಪ್ಟೆಂಬರ್ 12, 2021 ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ನೀಟ್-ಯುಜಿ ಆಕಾಂಕ್ಷಿಗಳು ಬುಧವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಹಲವು ನೀಟ್-ಯುಜಿ ಆಕಾಂಕ್ಷಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿರುವ ಆಕಾಂಕ್ಷಿಗಳು ಹೊಸದಾಗಿ ಪರೀಕ್ಷೆ ನಡೆಸಲು ನಿರ್ದೇಶನ ನೀಡಬೇಕು ಮತ್ತು ಫಲಿತಾಂಶ ಪ್ರಕಟಿಸದಂತೆ ತಡೆ ನೀಡಬೇಕು ಎಂದು ಕೋರಿದ್ದಾರೆ.

ಬಯೋಮೆಟ್ರಿಕ್ ಪರಿಶೀಲನೆ, ಜಾಮರ್‌ಗಳ ಬಳಕೆ ಸೇರಿದಂತೆ ಪರೀಕ್ಷೆಯನ್ನು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲು ಭದ್ರತಾ ಪ್ರೋಟೋಕಾಲ್‌ಗಳ ಗುಣಮಟ್ಟವನ್ನು ಹೆಚ್ಚಿಸುವಂತೆ ಶಿಕ್ಷಣ ಸಚಿವಾಲಯ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ನಿರ್ದೇಶನಗ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಒಂದು ವಾರದೊಳಗೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಎಲ್ಲಾ ಸೂಕ್ತ ಮಾಹಿತಿ ಮತ್ತು ದಾಖಲೆಗಳು ಹಾಗೂ ನೀಟ್-ಯುಜಿಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತ ಸತ್ಯಾಂಶದ ವರದಿಯನ್ನು ಸುಪ್ರೀಂ ಕೋರ್ಟ್ ಸಲ್ಲಿಸುವಂತೆ ಸಿಬಿಐ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಪೋಲಿಸ್ ಮಹಾನಿರ್ದೇಶಕರಿಗೆ ಸೂಚಿಸಬೇಕು ಎಂದು ಮನವಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com