ಗೋರಖ್ ಪುರ ಹೋಟೆಲ್ ದಾಳಿಯಲ್ಲಿ ಉದ್ಯಮಿ ಸಾವು ಪ್ರಕರಣ: ಆರು ಪೊಲೀಸ್ ಸಿಬ್ಬಂದಿ ಅಮಾನತು
ಗೋರಖ್ ಪುರ್ ದಾಳಿ ಪ್ರಕರಣದಲ್ಲಿ ಕಾನ್ಪುರ ಮೂಲದ ಉದ್ಯಮಿ ಸಾವನ್ನಪ್ಪಿದ ಕೇಸ್ ಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.
Published: 30th September 2021 03:07 PM | Last Updated: 30th September 2021 03:36 PM | A+A A-

ಸಾಂದರ್ಭಿಕ ಚಿತ್ರ
ಲಕ್ನೋ: ಗೋರಖ್ ಪುರ್ ದಾಳಿ ಪ್ರಕರಣದಲ್ಲಿ ಕಾನ್ಪುರ ಮೂಲದ ಉದ್ಯಮಿ ಸಾವನ್ನಪ್ಪಿದ ಕೇಸ್ ಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಕಾನೂನು ಸಚಿವ ಬ್ರಜೇಶ್ ಪಾಠಕ್ ಹೇಳಿದ್ದಾರೆ.
ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಪ್ರಕರಣ ನಡೆದಿದ್ದು, ದುರಾದೃಷ್ಟ ಎಂದು ಹೇಳಿದ್ದಾರೆ. ಅಮಾನತುಗೊಂಡಿರುವ ಆರು ಮಂದಿ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಈ ವಿಷಯವನ್ನು ತ್ವರಿತ ನ್ಯಾಯಾಲಯಕ್ಕೆ ಕೊಂಡೊಯ್ಯಲಾಗುವುದು ಎಂದು ಭರವಸೆ ನೀಡಿದ ಅವರು , ಆತ ಪೋಲೀಸ್ ಆಗಿರಲಿ ಅಥವಾ ಉನ್ನತ ಹುದ್ದೆಯಲ್ಲಿರಲಿ, ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ಪಾಠಕ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಉದ್ಯಮಿ ಮನೀಶ್ ಗುಪ್ತಾ ಅವರ ಮುಖ, ತಲೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿತ್ತು. ಸೆಪ್ಟೆಂಬರ್ 28 ರಂದು ಗೋರಖ್‌ಪುರದ ಹೋಟೆಲ್‌ನಲ್ಲಿ ನಡೆಸಿದ ದಾಳಿಯಲ್ಲಿ ಗುಪ್ತಾ ಸಾವನ್ನಪ್ಪಿದರು.