ದೆಹಲಿಯಲ್ಲಿ ಮತ್ತೊಬ್ಬರಿಗೆ ಮಂಕಿಪಾಕ್ಸ್ ಪಾಸಿಟಿವ್, ದೇಶದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪತ್ತೆಯಾದ 2ನೇ ಕೇಸ್ ಇದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪತ್ತೆಯಾದ 2ನೇ ಕೇಸ್ ಇದಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುತ್ತಿರುವ ಇತ್ತೀಚಿಗೆ ವಿದೇಶ ಪ್ರಯಾಣದ ಇತಿಹಾಸವನ್ನು ಹೊಂದಿರದ 35 ವರ್ಷದ ನೈಜೀರಿಯಾದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ನೈಜೀರಿಯನ್ ಪ್ರಜೆಯನ್ನು ಸೋಂಕಿನ ಚಿಕಿತ್ಸೆಗಾಗಿ ನೋಡಲ್ ಆಸ್ಪತ್ರೆಯಾದ ದೆಹಲಿ ಸರ್ಕಾರ ನಡೆಸುವ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಐದು ದಿನಗಳಿಂದ ಅವರಿಗೆ ಗುಳ್ಳೆಗಳು ಮತ್ತು ಜ್ವರದ ಲಕ್ಷಣವಿದೆ. ಅವರ ಮಾದರಿಗಳನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್‌ಐವಿ) ಕಳುಹಿಸಲಾಗಿದೆ. ಸೋಮವಾರ ಸಂಜೆ ಬಂದ ವರದಿಯು ಅವರಿಗೆ ಪಾಸಿಟಿವ್ ಎಂದು ತೋರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆಫ್ರಿಕನ್ ಮೂಲದ ಮಂಕಿಪಾಕ್ಸ್ ನ ಇಬ್ಬರು ಶಂಕಿತ ರೋಗಿಗಳನ್ನೂ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com