ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿಯಿಂದ ಅದೇ ಮಹಿಳೆ ಮೇಲೆ ಅತ್ಯಾಚಾರ, ವಿಡಿಯೊ ಮಾಡಿದ ಸ್ನೇಹಿತ!

2020ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿ, ಅದೇ ಮಹಿಳೆಗೆ ಚಾಕು ತೋರಿಸಿ ಬೆದರಿಸುವ ಮೂಲಕ ಮತ್ತೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಜಬಲ್ಪುರ: 2020ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿ, ಅದೇ ಮಹಿಳೆಗೆ ಚಾಕು ತೋರಿಸಿ ಬೆದರಿಸುವ ಮೂಲಕ ಮತ್ತೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ, ಈ ಹಿಂದೆ ತನ್ನ ವಿರುದ್ಧ ನೀಡಿರುವ ದೂರನ್ನು ಹಿಂಪಡೆಯುವಂತೆ ಬೆದರಿಕೆ ಹಾಕಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿ ಅತ್ಯಾಚಾರ ಎಸಗಿರುವ ಘಟನೆ ಸುಮಾರು ಒಂದು ತಿಂಗಳ ಹಿಂದೆ ನಡೆದಿದೆ ಎಂದು ಮಹಿಳೆ ದೂರಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈಗ 19 ವರ್ಷ ವಯಸ್ಸಿನ ಮಹಿಳೆ, ಎರಡು ವರ್ಷಗಳ ಹಿಂದೆ ಅಪ್ರಾಪ್ತೆಯಾಗಿದ್ದಾಗ ಅದೇ ಆರೋಪಿಯಿಂದ ಅತ್ಯಾಚಾರಕ್ಕೊಳಗಾಗಿದ್ದರು. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು 2020ರಲ್ಲಿ ಬಂಧಿಸಲಾಗಿತ್ತು. ಅದಾದ ಒಂದು ವರ್ಷದ ನಂತರ ಅಂದರೆ 2021ರಲ್ಲಿ ಜಾಮೀನಿನ ಮೇಲೆ ಆತ ಬಿಡುಗಡೆಯಾಗಿದ್ದ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ದೂರುದಾರರ ಪ್ರಕಾರ, ಆರೋಪಿ ವಿವೇಕ್ ಪಟೇಲ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದು, ತನ್ನ ಸ್ನೇಹಿತನೊಂದಿಗೆ ಸೇರಿ ಮತ್ತೆ ಅದೇ ಅಪರಾಧವನ್ನು ಎಸಗಿದ್ದಾನೆ' ಎಂದು ಪೊಲೀಸ್ ಠಾಣೆಯ ಉಸ್ತುವಾರಿ ಆಸಿಫ್ ಇಕ್ಬಾಲ್ ಹೇಳಿದ್ದಾರೆ.

'ಒಂದು ತಿಂಗಳ ಹಿಂದೆ ಆರೋಪಿ ತನ್ನ ಸ್ನೇಹಿತನೊಂದಿಗೆ ಬಲವಂತವಾಗಿ ತನ್ನ ಮನೆಗೆ ನುಗ್ಗಿ ಚಾಕು ತೋರಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯವನ್ನು ಆತನ ಸ್ನೇಹಿತ ರೆಕಾರ್ಡ್ ಮಾಡಿದ್ದಾನೆ. ನಂತರ ಈ ಹಿಂದೆ ಸಲ್ಲಿಸಿದ ದೂರನ್ನು ಹಿಂಪಡೆಯದಿದ್ದರೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿರುವುದಾಗಿ ಇಕ್ಬಾಲ್ ತಿಳಿಸಿದ್ದಾರೆ.

ಸೋಮವಾರ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com