ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಾಲ್ಕು ದಿನಗಳ ಭೇಟಿಗಾಗಿ ದೆಹಲಿಗೆ ಮಮತಾ ಬ್ಯಾನರ್ಜಿ ಆಗಮನ, ನಾಳೆ ಪ್ರಧಾನಿ ಮೋದಿ ಭೇಟಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಲ್ಕು ದಿನಗಳ ಭೇಟಿಯಾಗಿ ಗುರುವಾರ ನವದೆಹಲಿಗೆ ಆಗಮಿಸಿದ್ದಾರೆ. ನಾಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದು, ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲು ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.  

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಲ್ಕು ದಿನಗಳ ಭೇಟಿಯಾಗಿ ಗುರುವಾರ  ನವದೆಹಲಿಗೆ ಆಗಮಿಸಿದ್ದಾರೆ. ನಾಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದು, ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲು ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.  

ತೃಣ ಮೂಲ ಕಾಂಗ್ರೆಸ್ ವರಿಷ್ಠೆಯೂ ಆಗಿರುವ ಮಮತಾ ಬ್ಯಾನರ್ಜಿ ಪಕ್ಷದ ಸಂಸದರನ್ನು ಭೇಟಿ ಮಾಡಲಿದ್ದು, ಪ್ರಸ್ತುತ ಸಂಸತ್ ಅಧಿವೇಶನದ ಬೆಳವಣಿಗೆ ಮತ್ತು 2024 ರ ಲೋಕಸಭಾ ಚುನಾವಣೆ ವಿಷಯ ಕುರಿತಾಗಿಯೂ ಚರ್ಚಿಸಲಿದ್ದಾರೆ. ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಮತಾ ಬ್ಯಾನರ್ಜಿ ಭೇಟಿಯಾಗಲಿದ್ದು, ಜಿಎಸ್ ಟಿ ಪಾಲು ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

ಆಗಸ್ಟ್ 7 ರಂದು ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲಿರುವ ಮಮತಾ, ಇಡಿಯಿಂದ ತನಿಖೆಗೊಳ್ಳಗಾಗುತ್ತಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. 

Related Stories

No stories found.

Advertisement

X
Kannada Prabha
www.kannadaprabha.com