ಕೋವಿಡ್-19: ದೇಶದಲ್ಲಿ ಕೊರೋನಾಗೆ ಇಂದು 70 ಮಂದಿ ಬಲಿ, 20,551 ಮಂದಿಗೆ ಪಾಸಿಟಿವ್

ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ  20,551 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ  4,41,07,588ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ  20,551 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ  4,41,07,588ಕ್ಕೆ ಏರಿಕೆಯಾಗಿದೆ.

ಇನ್ನೂ ದೇಶದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 70 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 5,26,600ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.31ರಷ್ಟು ಸಕ್ರಿಯ ಪ್ರಕರಣಗಳು ಇದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.50ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೈನಂದಿನ ಪಾಸಿಟಿವಿಟಿ ದರ ಶೇ. 5.14ಕ್ಕೆ ಏರಿಕೆಯಾಗಿದ್ದರೆ, ಮರಣ ಪ್ರಮಾಣ ಶೇ. 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 4.64ರಷ್ಟಿದೆ. ಸೋಂಕಿನಿಂದ ಈವರೆಗೆ 4,34,24,624 ಜನರು ಚೇತರಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com