ಕೋವಿಡ್-19: ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ; 16,167 ಹೊಸ ಪಾಸಿಟಿವ್ ಕೇಸ್

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,167 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,41,61,899 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,35,510ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,167 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,41,61,899 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,35,510ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 15,549 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಈವರೆಗೆ 1,35,510 ಜನರು ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.31ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರ ಶೇ 98.50ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 6.14ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com