ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್
ದೇಶ
ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ನೇಮಕ
ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ.
ನವದೆಹಲಿ: ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಕಾನೂನು ಸಚಿವಾಲಯ ಮಾಹಿತಿ ನೀಡಿದ್ದು, ದೇಶದ 49ನೇ ಸಿಜೆಐಯಾಗಿ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದ್ದು, ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ.
ಎನ್.ವಿ.ರಮಣ ಸೇವಾವಧಿ ಅಂತ್ಯ ಬಳಿಕ ಸಿಜೆಐ ಆಗಿ ಪದಗ್ರಹಣ ಮಾಡಲಿದ್ದಾರೆ. ಸಿಜೆಐ ರಮಣ ಅವರ ಸೇವಾವಧಿ ಆಗಸ್ಟ್ 26, 2022 ರಂದು ಕೊನೆಗೊಳ್ಳಲಿದ್ದು, ಅಂದೇ ನ್ಯಾ.ಉದಯ್ ಉಮೇಶ್ ಲಲಿತ್ ಅವರು ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ