ಜಾನುವಾರು ಕಳ್ಳಸಾಗಣೆ ಪ್ರಕರಣ: ಮಮತಾ ಬ್ಯಾನರ್ಜಿ ಆಪ್ತ ಸಹಾಯಕನನ್ನು ಬಂಧಿಸಿದ ಸಿಬಿಐ

2020ರ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಹಾಗೂ ಟಿಎಂಸಿಯ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ.
ಟಿಎಂಸಿ ನಾಯಕ ಅನುಬ್ರತಾ ಮೊಂಡಲ್
ಟಿಎಂಸಿ ನಾಯಕ ಅನುಬ್ರತಾ ಮೊಂಡಲ್
Updated on

ಕೋಲ್ಕತ್ತಾ: 2020ರ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಹಾಗೂ ಟಿಎಂಸಿಯ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ.

ಜಾನುವಾರು ಕಳ್ಳಸಾಗಣೆ ಪ್ರಕರಣದ ತನಿಖೆಯ ಭಾಗವಾಗಿ ಮೊಂಡಲ್ ಅವರನ್ನು ಸಿಬಿಐ ಈ ಹಿಂದೆಯೂ ಎರಡು ಬಾರಿ ಪ್ರಶ್ನಿಸಿತ್ತು. ಇದೀಗ ಬಿರ್ಭೂಮ್ ಜಿಲ್ಲೆಯ ನಿವಾಸದಲ್ಲಿ ಅವರನ್ನು ಬಂಧಿಸಲಾಗಿದೆ.

2020ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ ನಂತರ ಜಾನುವಾರು ಕಳ್ಳಸಾಗಣೆ ಹಗರಣದ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಸಿಬಿಐ ಪ್ರಕಾರ, 2015 ಮತ್ತು 2017 ರ ನಡುವೆ ಗಡಿಯುದ್ದಕ್ಕೂ ಕಳ್ಳಸಾಗಣೆ ಮಾಡುತ್ತಿದ್ದರಿಂದ 20,000 ದನದ ತಲೆಗಳನ್ನು ಗಡಿ ಭದ್ರತಾ ಪಡೆ ವಶಪಡಿಸಿಕೊಂಡಿದೆ.

ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ಹಿಂದೆ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿತ್ತು. ಮೊಂಡಲ್ ಅವರ ಅಂಗರಕ್ಷಕ ಸೈಗಲ್ ಹೊಸೈನ್ ಅವರನ್ನೂ ತನಿಖಾ ಸಂಸ್ಥೆ ಬಂಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com