ಉತ್ತರ ಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ ನಾಲ್ವರು ಸಾವು, ಹಲವರು ನಾಪತ್ತೆ

ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮಾರ್ಕಾ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. ಅಲ್ಲದೆ ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಮುನಾ ನದಿ
ಯಮುನಾ ನದಿ

ಬಂದಾ: ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮಾರ್ಕಾ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. ಅಲ್ಲದೆ ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೋಟ್ ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೋಣಿಯಲ್ಲಿ 30 ರಿಂದ 35 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಅವರು ತಿಳಿಸಿದ್ದಾರೆ. 

ಏಳರಿಂದ ಎಂಟು ಮಂದಿ ಸುರಕ್ಷಿತವಾಗಿ ಈಜಿ ದಡ ಸೇರಿದ್ದು, ಇನ್ನೂ ಹಲವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ಹೆಚ್ಚುವರಿ ಎಸ್ಪಿ ಲಕ್ಷ್ಮಿ ನಿವಾಸ್ ಮಿಶ್ರಾ ಹೇಳಿದ್ದಾರೆ. 

ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದೋಣಿ ದುರಂತದಲ್ಲಿ ಮೃತರಿಗೆ ಸಂತಾಪ ಸೂಚಿಸಿದ್ದು, ಜಿಲ್ಲಾಡಳಿತ ಅಧಿಕಾರಿಗಳು, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ತಕ್ಷಣ ಸ್ಥಳಕ್ಕೆ ತೆರಳಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com