ಉತ್ತರ ಪ್ರದೇಶ: ನೂಪುರ್ ಶರ್ಮಾ ಹತ್ಯೆಗೆ ಯೋಜಿಸಿದ್ದ ಜೈಷ್-ಇ- ಮೊಹಮ್ಮದ್ ಉಗ್ರನ ಬಂಧನ

ಪ್ರವಾದಿ ಮೊಹಮದ್ ಪೈಗಂಬರ್ ಕುರಿತು ವಿವಾದಾತಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಮೇಲೆ ಆತ್ಮಾಹತ್ಯಾ ದಾಳಿ ನಡೆಸಲು ನಿಯೋಜಿಸಲಾಗಿದ್ದ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ಉಗ್ರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ.
ಆರೋಪಿ ಮೊಹಮ್ಮದ್
ಆರೋಪಿ ಮೊಹಮ್ಮದ್

ಲಖನೌ: ಪ್ರವಾದಿ ಮೊಹಮದ್ ಪೈಗಂಬರ್ ಕುರಿತು ವಿವಾದಾತಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಮೇಲೆ ಆತ್ಮಾಹತ್ಯಾ ದಾಳಿ ನಡೆಸಲು ನಿಯೋಜಿಸಲಾಗಿದ್ದ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ಉಗ್ರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ.

ಮೊಹಮ್ಮದ್ ನದೀಮ್ (25) ಬಂಧಿತ ಆರೋಪಿ. ಈತ ಸಹರಾನ್‌ಪುರ ಜಿಲ್ಲೆಯ ಗಂಗೋಹ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದ ಕಲಾ ಗ್ರಾಮದವನು ಎಂದು ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನದೀಮ್ ಫೋನ್‌ನಿಂದ  ಚಾಟ್‌ಗಳು ಮತ್ತು ಧ್ವನಿ ಸಂದೇಶಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆತನಿಂದ ಎರಡು ಸಿಮ್ ಕಾರ್ಡ್‌ಗಳು ಮತ್ತು ವಿವಿಧ ರೀತಿಯ ಬಾಂಬ್‌  ಸಿದ್ಧಪಡಿಸುವ ಸಾಹಿತ್ಯವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಹೇಳಿದ್ದಾರೆ. 

ಲಕ್ನೋದ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. 2018 ರಿಂದ ಜೆಇಎಂ ಜೊತೆ ನೇರ ಸಂಪರ್ಕದಲ್ಲಿದ್ದು, ವಿಶೇಷ ತರಬೇತಿಗಾಗಿ ಪಾಕಿಸ್ತಾನ ಮತ್ತು ಸಿರಿಯಾಕ್ಕೆ ಆಹ್ವಾನಿಸಲಾಗಿತ್ತು. ವೀಸಾಕ್ಕಾಗಿ ಕಾಯುತ್ತಿದ್ದಾಗಿ ನದೀಮ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com