ಬಿಗ್ ಬುಲ್ ಖ್ಯಾತಿಯ ಷೇರುಪೇಟೆ ಹೂಡಿಕೆದಾರ ರಾಕೇಶ್ ಜುಂಜುನ್ ವಾಲಾ ನಿಧನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಭಾರತದ ವಾರನ್ ಬಫೆಟ್ ಎಂದು ಕೀರ್ತಿ ಗಳಿಸಿದ್ದ ಬಿಗ್ - ಬುಲ್ ಖ್ಯಾತಿಯ ಷೇರುಪೇಟೆ ಹೂಡಿಕೆದಾರ, ಆಕಾಸಾ ವಿಮಾನಯಾನ ಸಂಸ್ಥಾಪಕ ರಾಕೇಶ್ ಜುಂಜುನ್ವಾಲಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅವರಿಗೆ 62 ವರ್ಷ ವಯಸ್ಸಾಗಿತ್ತು. ರಾಕೇಶ್ ಜುಂಜುನ್ವಾಲಾ ಅವರ ಆಕಾಸಾ ಏರ್ಲೈನ್ಸ್ ಕಳೆದ ಆಗಸ್ಟ್ 7 ರಂದು ಚಾಲನೆ ಕಂಡಿತ್ತು. ಫೋರ್ಬ್ಸ್ ಪಟ್ಟಿಯ ಪ್ರಕಾರ, 2021 ರಲ್ಲಿ ಭಾರತದ 36ನೇ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ 438ನೇ ಶ್ರೀಮಂತ ವ್ಯಕ್ತಿಯಾಗಿದ್ದರು.
ಇನ್ನು ರಾಕೇಶ್ ಜುಂಜುನ್ವಾಲಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.ರಾಕೇಶ್ ಜುಂಜುನ್ವಾಲಾ ಅವರದ್ದು ಅದಮ್ಯ ವಕ್ತಿತ್ವ. ಪೂರ್ಣ ಜೀವನ, ಹಾಸ್ಯ ಮತ್ತು ಒಳನೋಟವುಳ್ಳ ಅವರು ಆರ್ಥಿಕ ಜಗತ್ತಿಗೆ ಅಳಿಸಲಾಗದ ಕೊಡುಗೆಯನ್ನು ಬಿಟ್ಟು ಹೋಗುತ್ತಾರೆ. ಅವರು ಭಾರತದ ಪ್ರಗತಿಯ ಬಗ್ಗೆ ತುಂಬಾ ಉತ್ಸುಕರಾಗಿದ್ದರು. ಅವರ ಅಗಲಿಕೆ ದುಃಖ ತಂದಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


