ನವದೆಹಲಿ: ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.
2024 ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವುದಕ್ಕೆ ಸೋನಿಯಾ ಗಾಂಧಿ ಅವರೇ ಕಾಂಗ್ರೆಸ್ ನ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಇಬ್ಬರು ಉಪಾಧ್ಯಕ್ಷರಿರಲಿದ್ದು, ಉತ್ತರ ಭಾರತದ ಉಸ್ತುವಾರಿಯಾಗಿ ಅಶೋಕ್ ಗೆಹ್ಲೋಟ್ ಹಾಗೂ ದಕ್ಷಿಣ ಭಾರತದ ಉಸ್ತುವಾರಿಯಾಗಿ ಚಿದಂಬರಮ್ ಕಾರ್ಯನಿರ್ವಹಿಸಲಿದ್ದಾರೆ.
ಇನ್ನು ಚಿದಂಬರಮ್ ಬದಲಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಉತ್ತಮ ಆಯ್ಕೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಒಂದು ವೇಳೆ ಚಿದಂಬರಂ ಅವರ ಬದಲಿಗೆ ಡಿ.ಕೆ ಶಿವಕುಮಾರ್ ಅವರನ್ನು ನೇಮಕ ಮಾಡಿದರೆ 2023 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಸಿಎಂ ಅಭ್ಯರ್ಥಿ ಕನಸು ನನಸಾಗಲಿದೆ ಎಂದೂ ವಿಶ್ಲೇಷಿಸಲಾಗುತ್ತಿದೆ.
ಇನ್ನು ರಾಹುಲ್ ಗಾಂಧಿ 2024 ರ ಲೋಕಸಭಾ ಚುನಾವಣೆಯ ಬಳಿಕ ಪಕ್ಷದ ಮರುಸಂಘಟನೆಗೆ ನೀಲನಕ್ಷೆ ತಯಾರಿಯಲ್ಲಿ ನಿರತರಾಗಿದ್ದಾರೆ.
Advertisement