ಶಿಕ್ಷಣ, ಆರೋಗ್ಯವನ್ನು ಉಚಿತವಾಗಿ ನೀಡುವುದು 'ರೇವಡಿ' ಆಗುವುದಿಲ್ಲ: ಪ್ರಧಾನಿ ಮೋದಿಗೆ ಅರವಿಂದ ಕೇಜ್ರಿವಾಲ್ ತಿರುಗೇಟು

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಭಾರತದ ಬೆಳವಣಿಗೆಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಮಹತ್ವದ್ದಾಗಿದೆ. ಈ ಕಲ್ಯಾಣ ಯೋಜನೆಗಳನ್ನು "ಉಚಿತ ಕೊಡುಗೆ" ಅಥವಾ ''ರೇವಡಿ'' ಎಂದು ಕರೆಯಲಾಗುವುದಿಲ್ಲ ಎಂದಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಭಾರತದ ಬೆಳವಣಿಗೆಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಮಹತ್ವದ್ದಾಗಿದೆ. ಈ ಕಲ್ಯಾಣ ಯೋಜನೆಗಳನ್ನು "ಉಚಿತ ಕೊಡುಗೆ" ಅಥವಾ ''ರೇವಡಿ'' ಎಂದು ಕರೆಯಲಾಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

'ಗುಣಮಟ್ಟದ ಶಿಕ್ಷಣದಿಂದ ಕೇವಲ ಒಂದು ಪೀಳಿಗೆಯಲ್ಲಿ ಬಡತನ ನಿರ್ಮೂಲನೆ ಮಾಡಬಹುದು. ಶಿಕ್ಷಣ ಕ್ರಾಂತಿಯಿಂದಾಗಿ ಬಡವರ ಮಗುವೊಂದು ದೆಹಲಿಯಲ್ಲಿ ವಕೀಲ ಅಥವಾ ಇಂಜಿನಿಯರ್ ಆಗುವ ಕನಸು ಕಾಣಬಹುದಾಗಿದೆ' ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಸರ್ಕಾರದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ಬಡವರಿಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ನೀಡುವ ಮೂಲಕ ನಾನು ಏನಾದರೂ ತಪ್ಪು ಮಾಡಿದ್ದೀನಾ ಎಂದು ಕೇಳಿದರು.

'ನಾವು ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಿದ್ದೇವೆ ಮತ್ತು ಮೊಹಲ್ಲಾ ಚಿಕಿತ್ಸಾಲಯಗಳನ್ನು ಸ್ಥಾಪಿಸಿದ್ದೇವೆ. ದೆಹಲಿಯಲ್ಲಿ ಎಲ್ಲರಿಗೂ ಉಚಿತ ಆರೋಗ್ಯ ಸೇವೆಗೆ ಪ್ರವೇಶವಿದೆ. ಜನರಿಗೆ ಉತ್ತಮ ಆರೋಗ್ಯವನ್ನು ಒದಗಿಸುವುದು ಉಚಿತ ಕೊಡುಗೆಯಲ್ಲ' ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇತ್ತೀಚೆಗೆ 'ರೇವಡಿ ರೆವ್ಡಿ ಸಂಸ್ಕೃತಿ" ಅಥವಾ ಮತಗಳನ್ನು ಪಡೆಯಲು ಉಚಿತ ಕೊಡುಗೆಯ ವಿರುದ್ಧ ಜನರನ್ನು ಎಚ್ಚರಿಸಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರು ತಮ್ಮ ಕಲ್ಯಾಣ ಯೋಜನೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಎಎಪಿಯ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಮೋದಿ, ‘ಮತ ಗಳಿಸಲು ಉಚಿತ ಕೊಡುಗೆ ಭರವಸೆಗಳ ಸಂಸ್ಕೃತಿ ಈ ದಿನಗಳಲ್ಲಿ ಸಾಮಾನ್ಯ. ಜನರು, ಅದರಲ್ಲೂ ಯುವಜನರು ಇದಕ್ಕೆ ಬಲಿಯಾಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ. ಇಂತಹ ರೇವಡಿ (ಉತ್ತರಪ್ರದೇಶ ಸೇರಿ ಉತ್ತರ ಭಾರತದ ಹಬ್ಬಗಳಲ್ಲಿ ನೀಡುವ ಜನಪ್ರಿಯ ಸಿಹಿ ತಿನಿಸಿಗೆ ರೇವಡಿ ಎನ್ನುವ ಹೆಸರಿದೆ) ಉಚಿತ ಕೊಡುಗೆಗಳು ಎಂದಿಗೂ ತಡೆರಹಿತ ಹೆದ್ದಾರಿಗಳು, ರಕ್ಷಣಾ ಕಾರಿಡಾರ್‌ಗಳು ಅಥವಾ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾರವು’ ಎಂದು ಅವರು ಹೇಳಿದ್ದರು.

ಕಳೆದ ವಾರ ಅರವಿಂದ್ ಕೇಜ್ರಿವಾಲ್ ಅವರ ಡೆಪ್ಯುಟಿ ಮನೀಶ್ ಸಿಸೋಡಿಯಾ ಕೂಡ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. 'ಇದು ಶಿಕ್ಷಣ ವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ 'ನಾಶಗೊಳಿಸುತ್ತದೆ'. ಇದರಿಂದಾಗಿ ಸಾಮಾನ್ಯ ಜನರು ಒತ್ತಾಯಪೂರ್ವಕವಾಗಿ ತಮ್ಮ ಮಕ್ಕಳನ್ನು 'ತಮ್ಮ ಸ್ನೇಹಿತರ' ಒಡೆತನದ ಖಾಸಗಿ ಶಾಲೆಗಳಿಗೆ ಕಳುಹಿಸಬೇಕಾಗುತ್ತದೆ. 'ಕೇಂದ್ರವು ಅವರ ಸ್ನೇಹಿತರ' ಲಕ್ಷ ಕೋಟಿಗಳ ಸಾಲವನ್ನು ಮನ್ನಾ ಮಾಡುತ್ತಿದೆ. ಹೀಗಿರುವಾಗ, ಎಎಪಿ ಸರ್ಕಾರ ಕೈಗೊಂಡ ಕಲ್ಯಾಣ ಕ್ರಮಗಳನ್ನು 'ಉಚಿತ ಕೊಡುಗೆ' ಎಂದು ಕರೆಯುತ್ತಿದೆ' ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com