ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ; ಗ್ರೆನೇಡ್ ತೂರಿದ ಉಗ್ರರು- ಒರ್ವ ಪೊಲೀಸ್ ಸಿಬ್ಬಂದಿಗೆ ಗಾಯ 

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. 
ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ (ಸಂಗ್ರಹ ಚಿತ್ರ)
ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ (ಸಂಗ್ರಹ ಚಿತ್ರ)
Updated on

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. 

ಒಂದು ಗಂಟೆಯ ಅವಧಿಯಲ್ಲಿ ಸತತ ಎರಡು ಗ್ರೆನೇಡ್ ದಾಳಿ ನಡೆದಿದ್ದು, ಓರ್ವ ಪೋಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮತ್ತೊಂದು ದಾಳಿಯಲ್ಲಿ ಭಯೋತ್ಪಾದಕರು ಬದ್ಗಾಮ್ ನ ಗೋಪಾಲ್ ಪೋರ ಚದೂರ ಪ್ರದೇಶದಲ್ಲಿ ಗ್ರೆನೇಡ್ ದಾಳಿ ನಡೆದಿದ್ದು, ಕರಣ್ ಕುಮಾರ್ ಸಿಂಗ್ ಎಂಬ ಓರ್ವ ಜನಸಾಮಾನ್ಯ ತೀವ್ರವಾಗಿ ಗಾಯಗೊಂಡಿದ್ದಾರೆ. 

ಗಾಯಗೊಂಡ ವ್ಯಕ್ತಿಯನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com