ಸಾಂದರ್ಭಿಕ ಚಿತ್ರ
ದೇಶ
ಜಮ್ಮುವಿನಲ್ಲಿ ಒಂದೇ ಕುಟುಂಬದ ಆರು ಮಂದಿ ಮನೆಯಲ್ಲಿಯೇ ಶವವಾಗಿ ಪತ್ತೆ!
ಬುಧವಾರ ತಮ್ಮ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು: ಬುಧವಾರ ತಮ್ಮ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಸಕೀನಾ ಬೇಗಂ, ಅವರ ಇಬ್ಬರು ಪುತ್ರಿಯರಾದ ನಸೀಮಾ ಅಖ್ತರ್ ಮತ್ತು ರುಬಿನಾ ಬಾನೊ, ಮಗ ಜಾಫರ್ ಸಲೀಂ ಮತ್ತು ಇಬ್ಬರು ಸಂಬಂಧಿಕರಾದ ನೂರ್ ಉಲ್ ಹಬೀಬ್ ಮತ್ತು ಸಾಜದ್ ಅಹ್ಮದ್ ಎಂದು ಗುರುತಿಸಲಾಗಿದೆ.
ಮೃತದೇಹಗಳು ಸಿದ್ರಾ ಪ್ರದೇಶದ ಅದೇ ಕುಟುಂಬದ ಮನೆಯಲ್ಲಿಯೇ ಪತ್ತೆಯಾಗಿವೆ. ಅವುಗಳನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ