ಉತ್ತರ ಪ್ರದೇಶ: 35 ವರ್ಷದ ಪತ್ನಿಯನ್ನು ಗುಂಡಿಕ್ಕಿ ಕೊಂದ ನಿವೃತ್ತ ಯೋಧ!

ಉತ್ತರ ಪ್ರದೇಶದ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜಗಳದ ವೇಳೆ ನಿವೃತ್ತ ಸೇನಾ ವ್ಯಕ್ತಿಯೊಬ್ಬ ತನ್ನ 35 ವರ್ಷದ ಪತ್ನಿಗೆ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಲಖನೌ: ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜಗಳದ ವೇಳೆ ನಿವೃತ್ತ ಯೋಧರೊಬ್ಬರು ತಮ್ಮ 35 ವರ್ಷದ ಪತ್ನಿಗೆ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ನ್ಯೂ ತುಳಸಿ ಅಡ್ಡಾ ಪ್ರದೇಶದಲ್ಲಿ ಬುಧವಾರ ರಾತ್ರಿ ಸತೀಶ್ ಕುಮಾರ್ ಯಾದವ್ ಅವರು, ತಮ್ಮ ಪತ್ನಿ ಸಪ್ನಾಳನ್ನು ತಮ್ಮ ಪರವಾನಗಿ ಪಡೆದ ಪಿಸ್ತೂಲ್‌ನಿಂದ ಗುಂಡಿಕ್ಕಿ ಕೊಂದಿದ್ದಾರೆ ಎಂದು ನಗರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಪಿಲ್ ದೇವ್ ತಿಳಿಸಿದ್ದಾರೆ.

ಪತಿ-ಪತ್ನಿ ಇಬ್ಬರೂ ಜಗಳವಾಡಿದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಸತೀಶ್ ಪರಾರಿಯಾಗಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com