ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 15,754 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,14, 618 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇಂದು ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳು 1,01,830ಕ್ಕೆ ಇಳಿಕೆಯಾಗಿದೆ.
ಇದೇ ಅವಧಿಯಲ್ಲಿ 47 ಜನರು ಸೋಂಕಿನಿಂದ ಮೃತಪಟ್ಟಿದ್ದು, ಈ ಪೈಕಿ ಕೇರಳವೊಂದರಲ್ಲೇ ಅಧಿಕ 8 ಜನರು ಸಾವಿಗೀಡಾಗಿದ್ದಾರೆ. ಈವರೆಗೆ 5,27,253 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.23ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರ ಶೇ 98.58ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 3.48ರಷ್ಟಿದೆ.
Advertisement