ಕೋವಿಡ್-19: ಕಳೆದ 24 ಗಂಟೆಗಳಲ್ಲಿ 8,586 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,586 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಈವರೆಗೆ ಸೋಂಕಿತರಾದವರ ಸಂಖ್ಯೆ 4,43,57,546ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,586 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಈವರೆಗೆ ಸೋಂಕಿತರಾದವರ ಸಂಖ್ಯೆ 4,43,57,546ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಸದ್ಯ 96,506 ಪ್ರಕರಣಗಳಿವೆ. ಇದೇ ಅವಧಿಯಲ್ಲಿ 48 ಜನರು ಸೋಂಕಿನಿಂದ ಮೃತಪಟ್ಟಿದ್ದು, ಈ ಪೈಕಿ ಕೇರಳದಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 5,27,416 ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.22ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.59ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 2.19ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 210.31 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ ಅನ್ನು ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com