ಸೆಪ್ಟೆಂಬರ್ 7 ರಿಂದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ; ಲೋಗೋ, ಭಿತ್ತಿಪತ್ರ ಬಿಡುಗಡೆ
ನವದೆಹಲಿ: ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ 'ಭಾರತ್ ಜೋಡೋ ಯಾತ್ರೆ'ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದೆ.
ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜೈರಾಮ್ ರಮೇಶ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡರು.ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೈ ರಾಮ್ ರಮೇಶ್, ಈ ಸಂಬಂಧ ವೆಬ್ ಸೈಟ್ ವೊಂದನ್ನು ಕೂಡಾ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
ಈ ವೆಬ್ ಸೈಟ್ ನಲ್ಲಿ ಯಾತ್ರೆಯ ಲೈವ್ ಸ್ಟ್ರಿಮಿಂಗ್ ದೊರೆಯಲಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರು ಪಕ್ಷದ ಧ್ವಜವನ್ನು ಬಳಸುವುದಿಲ್ಲ, ಬದಲಿಗೆ ತ್ರಿವರ್ಣ ಧ್ವಜ ಬಳಸಲಿದ್ದಾರೆ ಎಂದು ಎಂದು ದಿಗ್ವಿಜಯ್ ಸಿಂಗ್ ಹೇಳಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್ ಜೋಡೋ ಯಾತ್ರೆ ನಡೆಯಲಿದೆ. 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಈ ಯಾತ್ರೆ ನಡೆಯಲಿದ್ದು, ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಸಮಾನ ಮನಸ್ಕರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ