ರಾಜಸ್ಥಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್, ಸಿಬ್ಬಂದಿ ಸುರಕ್ಷಿತ

ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮಂಗಳವಾರ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಸ್ಥಾನದ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್
ರಾಜಸ್ಥಾನದ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್
Updated on

ಜೈಪುರ: ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮಂಗಳವಾರ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮಂಗಳವಾರ ಬೆಳಗ್ಗೆ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಸಂಗಾರಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಹನುಮಾನ್‌ರಾಮ್ ವಿಷ್ಣೋಯ್ ಮಾಹಿತಿ ನೀಡಿದ್ದಾರೆ.

'ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಅದರಲ್ಲಿನ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com