ಬಿಜೆಪಿ ನಾಯಕಿ, ಟಿಕ್​ಟಾಕ್ ಸ್ಟಾರ್ ಸೋನಾಲಿ ಫೋಗಟ್ ಗೋವಾದಲ್ಲಿ ನಿಧನ!

ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್, ನಟಿ ಸೋನಾಲಿ ಫೋಗಟ್  ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆಗಸ್ಟ್ 22ರಂದು ಸೋಮವಾರ ರಾತ್ರಿ ನಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ
ಸೋನಾಲಿ ಪೋಗಟ್
ಸೋನಾಲಿ ಪೋಗಟ್
Updated on

ಚಂಡೀಗಡ: ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್, ನಟಿ ಸೋನಾಲಿ ಫೋಗಟ್  ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆಗಸ್ಟ್ 22ರಂದು ಸೋಮವಾರ ರಾತ್ರಿ ನಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ

42 ವರ್ಷದ ಸೋನಾಲಿ ಪೋಗಟ್‌ 2019ರ ಹರ್ಯಾಣ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ಟಿಕೆಟ್‌ನಿಂದ ಅದಂಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಅದಲ್ಲದೆ, ಪ್ರಖ್ಯಾತ ರಿಯಾಲಿಟಿ ಶೋ ಬಿಗ್‌ ಬಾಸ್‌ನ 14ನೇ ಆವೃತ್ತಿಯ ಸ್ಪರ್ಧಿಯಾಗಿದ್ದ ಸೋನಾಲಿ ಇತ್ತೀಚೆಗೆ ಗೋವಾಕ್ಕೆ ಪ್ರವಾಸಕ್ಕೆಂದು ತೆರಳಿದ್ದರು.

ಚುನಾವಣೆಯ ವೇಳೆ ತಮ್ಮ ಟಿಕ್‌ ಟಾಕ್‌ ವಿಡಿಯೋಗಳಿಂದ ಸೋನಾಲಿ ಪೋಗಟ್‌ ಸಾಕಷ್ಟು ಪ್ರಸಿದ್ಧಿ ಪಡೆದುಕೊಂಡಿದ್ದರು.  ಸಾವಿಗೂ ಮುನ್ನ ಕೂಡ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಡಿಯೋವೊಂದನ್ನೂ ಕೂಡ ಅವರು ಪೋಸ್ಟ್‌ ಮಾಡಿದ್ದಾರೆ. ಅದಲ್ಲದೆ, ಟ್ವಟಿರ್‌ ಅಕೌಂಟ್‌ನಲ್ಲಿ ತಮ್ಮ ಫ್ರೊಫೈಲ್‌ ಪಿಕ್ಚರ್‌ ಕೂಡ ಅವರು ಬದಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com