ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ
ನವದೆಹಲಿ: ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಬುಧವಾರ ತಮ್ಮ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷದ ನಿರ್ಧಾಗಳು ದೇಶದ ಹಿತಾಸಕ್ತಿಯಿಂದ ಕೂಡಿಲ್ಲ. "ಸ್ವಯಂ ಸೇವಾ ಹಿತಾಸಕ್ತಿಗಳಿಂದ ಪ್ರಭಾವಿತವಾಗಿವೆ" ಎಂದು ಆರೋಪಿಸಿದ್ದಾರೆ.
ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಶೆರ್ಗಿಲ್ ಅವರು ರಾಷ್ಟ್ರೀಯ ವಕ್ತಾರ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ ಮತ್ತು ಅದಕ್ಕೆ ಪ್ರಾಥಮಿಕ ಕಾರಣ ಎಂದರೆ "ಕಾಂಗ್ರೆಸ್ ನ ಪ್ರಸ್ತುತ ನಿರ್ಧಾರ ತೆಗೆದುಕೊಳ್ಳುವವರ ಸಿದ್ಧಾಂತ ಮತ್ತು ದೃಷ್ಟಿಕೋನವು ಪಕ್ಷದ ಆಕಾಂಕ್ಷೆಗಳೊಂದಿಗೆ ಹೊಂದಾಣಿಕೆಯಾಗುವುದಿಲ್ಲ ಎಂದಿದ್ದಾರೆ.
ಪಕ್ಷದ ನಿರ್ಣಯಗಳು ಸಾರ್ವಜನಿಕ ಮತ್ತು ದೇಶದ ಹಿತಾಸಕ್ತಿಗಳಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗಿದೆ. ಬದಲಿಗೆ ಇದು ವ್ಯಕ್ತಿಗಳ ಸ್ವ-ಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿರುತ್ತದೆ ಮತ್ತು ನೆಲದ ವಾಸ್ತವ ಸಂಗತಿಗಳನ್ನು ಕಡೆಗಣಿಸುತ್ತದೆ ಎಂದು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರಗದಲ್ಲಿ ಶೆರ್ಗಿಲ್ ಹೇಳಿದ್ದಾರೆ.
ವರದಿಗಳ ಪ್ರಕಾರ ಜೈವೀರ್ ಅವರಿಗೆ ಕೆಲವು ತಿಂಗಳಿನಿಂದ ಪತ್ರಿಕಾಗೋಷ್ಠಿ ನಡೆಸುವುದಕ್ಕೆ ಆವಕಾ ಕೊಟ್ಟಿರಲಿಲ್ಲ. ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಅವರು ಪಕ್ಷದ ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಜೈವೀರ್ ರಾಜೀನಾಮೆ ಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ