ಬದೌನ್: ಇಲ್ಲಿನ ಕುನ್ವರ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಲವಿಸರ್ಜನೆಗೆಂದು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಆಕೆಯ ಗ್ರಾಮದ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ಮನೆಯ ಸಮೀಪವಿರುವ ಕಬ್ಬಿನ ಗದ್ದೆಗೆ ತೆರಳುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ ಯುವಕ ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಬ್ಬಿನ ಗದ್ದೆಯಿಂದ ಬಾಲಕಿಯ ಚೀರಾಟ ಕೇಳಿ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ, ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೆಳಗ್ಗೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕಿಶೋರ್ ಶ್ರೀವಾಸ್ತವ ತಿಳಿಸಿದ್ದಾರೆ.
ಇದನ್ನೂ ಓದಿ: ಘಾಜಿಯಾಬಾದ್: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ
Advertisement