ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಮುಂದೂಡಿಕೆ ಸಾಧ್ಯತೆ

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಕೆಲವು ವಾರಗಳ ಕಾಲ ಮುಂದೂಡುವ ಸಾಧ್ಯತೆಯಿದೆ. ಆಗಸ್ಟ್ 28 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಕೆಲವು ವಾರಗಳ ಕಾಲ ಮುಂದೂಡುವ ಸಾಧ್ಯತೆಯಿದೆ. ಆಗಸ್ಟ್ 28 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ.

ಆಗಸ್ಟ್ 21 ರಿಂದ ಸೆಪ್ಟೆಂಬರ್ 20ರ ನಡುವೆ ಚುನಾವಣೆ ನಡೆಯಲಿದೆ ಎಂದು ಈ ಹಿಂದೆ ಘೋಷಿಸಲಾಗಿತ್ತು. ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಲು ನಿರಾಸಕ್ತಿ ವಹಿಸಿರುವುದರೊಂದಿಗೆ ಅಧ್ಯಕ್ಷರು ಯಾರು ಆಗಬೇಕೆಂಬುದು ಕಾಂಗ್ರೆಸ್ ನಲ್ಲಿ ಇದೀಗ ದೊಡ್ಡ ಸವಾಲು ಆಗಿದೆ.

ಆಗಸ್ಟ್ 20 ರವರೆಗೂ ಆಂತರಿಕ ಚುನಾವಣಾ ಪ್ರಕ್ರಿಯೆಯನ್ನು ಕಾಂಗ್ರೆಸ್ ಪೂರ್ಣಗೊಳಿಸಿದೆ. ಆದರೆ ಪದೇ ಪದೇ ಪ್ರಯತ್ನದ ಹೊರತಾಗಿಯೂ ರಾಹುಲ್ ಗಾಂಧಿ ತನ್ನ ನಿಲುವನ್ನು ಸ್ಪಷ್ಟಪಡಿಸಿಲ್ಲ. ನಿಗದಿತ ವೇಳೆಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಕೇಂದ್ರೀಯ ಚುನಾವಣಾ ಸಮಿತಿ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ರಾಹುಲ್ ಗಾಂಧಿ ಅಧ್ಯಕ್ಷೆ ಹುದ್ದೆಗೆ ಒಲವು ತೋರದಿದ್ದಲ್ಲಿ ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಮುಕುಲ್ ವಾಸ್ನಿಕ್ ಅವರಲ್ಲಿ ಒಬ್ಬರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.

Related Stories

No stories found.

Advertisement

X
Kannada Prabha
www.kannadaprabha.com