ಅಮಾನತುಗೊಂಡಿರುವ ಬಿಜೆಪಿ ಶಾಸಕ ರಾಜಾಸಿಂಗ್
ದೇಶ
ಪ್ರವಾದಿ ಮೊಹಮ್ಮದ್ ಕುರಿತ ವಿವಾದ: ಅಮಾನತುಗೊಂಡಿರುವ ಬಿಜೆಪಿ ಶಾಸಕ ರಾಜಾ ಸಿಂಗ್ ಮತ್ತೆ ಬಂಧನ
ವಾದಿ ಮೊಹಮ್ಮದ್ ಕುರಿತ ಅವಹೇಳಕಾರಿ ಹೇಳಿಕೆ ಆರೋಪದ ಮೇರೆಗೆ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ಅವರನ್ನು ತೆಲಂಗಾಣ ಪೊಲೀಸರು ಇಂದು ಮತ್ತೆ ಬಂಧಿಸಿದ್ದಾರೆ.
ತೆಲಂಗಾಣ: ಪ್ರವಾದಿ ಮೊಹಮ್ಮದ್ ಕುರಿತ ಅವಹೇಳಕಾರಿ ಹೇಳಿಕೆ ಆರೋಪದ ಮೇರೆಗೆ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ಅವರನ್ನು ತೆಲಂಗಾಣ ಪೊಲೀಸರು ಇಂದು ಮತ್ತೆ ಬಂಧಿಸಿದ್ದಾರೆ.
ಹೈದ್ರಾಬಾದ್ ನಲ್ಲಿರುವ ಅವರ ನಿವಾಸದಿಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಭಾರೀ ಸಂಖ್ಯೆಯ ಜನರು ನೆರೆದಿದ್ದರು.
ಪ್ರವಾದಿ ಮೊಹಮ್ಮದ್ ಕುರಿತ ಅವಹೇಳನಕಾರಿ ಹೇಳಿಕೆ ನೀಡಿರುವ ರಾಜಾಸಿಂಗ್ ಅವರನ್ನು ಬಂಧಿಸುವಂತೆ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ನಂತರ ಮಂಗಳವಾರ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಅವರ ಬಂಧನವಾದ ಕೆಲವೇ ಗಂಟೆಗಳಲ್ಲಿ ಹೈದ್ರಾಬಾದ್ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ