ಬಿಜೆಪಿ ರಾಜ್ಯ ಸರ್ಕಾರಗಳ ಸರಣಿ ಹಂತಕ: ದೆಹಲಿ ಸಿಎಂ ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ರಾಜ್ಯ ಸರ್ಕಾರಗಳ ಸರಣಿ ಹಂತಕ ಎಂದು ಶುಕ್ರವಾರ ಆಕ್ರೋಶ...
ದೆಹಲಿ ಸಿಎಂ ಕೇಜ್ರಿವಾಲ್
ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ರಾಜ್ಯ ಸರ್ಕಾರಗಳ ಸರಣಿ ಹಂತಕ ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ದೆಹಲಿ ಸಚಿವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳು ಇತ್ತೀಚೆಗೆ ನಡೆಸಿದ ದಾಳಿಗಳು ಗುಜರಾತ್ ಚುನಾವಣೆಗೆ ಸಂಬಂಧಿಸಿವೆ ಎಂದು ಆರೋಪಿಸಿದರು.

ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ ಸಿಎಂ, ಕೇಂದ್ರ ಸರ್ಕಾರ ಹಣ ಬಳಸಿ ಹಲವು ರಾಜ್ಯ ಸರ್ಕಾರಗಳನ್ನು ಬುಡಮೇಲು ಮಾಡಿದೆ. ಸರ್ಕಾರಗಳನ್ನು ಉರುಳಿಸುವ ಸರಣಿ ಹಂತಕನಂತೆ ವರ್ತಿಸುತ್ತಿದೆ. ಆದರೆ ಎಎಪಿ ಶಾಸಕರು ಪಕ್ಷಾಂತರ ಮಾಡಿಲ್ಲ ಎಂದು ಸಾಬೀತುಪಡಿಸಲು ತಾವು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ತಿಳಿಸಿದರು.

"ಗುಜರಾತ್‌ನಲ್ಲಿ ಬಿಜೆಪಿಯ ಭಧ್ರ ಕೋಟೆ ಅಪಾಯದಲ್ಲಿದೆ ಮತ್ತು ಈಗ ಕುಸಿಯುತ್ತಿದೆ. ಮುಂಬರುವ ಗುಜರಾತ್ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ನಮ್ಮ ಮೇಲೆ ಇಡಿ, ಸಿಬಿಐ ದಾಳಿ ನಡೆಸುತ್ತಿದೆ" ಎಂದು ಆರೋಪಿಸಿದರು.

ತಮ್ಮ ಡೆಪ್ಯೂಟಿ ಸಿಎಂ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದಾಗ ಒಂದು ಪೈಸೆಯೂ ಸಿಗಲಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

"ಪಟ್ಟಭದ್ರ ಹಿತಾಸಕ್ತಿಗಳು ಈಗ ದೆಹಲಿ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ. ಅವರು ಮಣಿಪುರ, ಗೋವಾ, ಮಧ್ಯಪ್ರದೇಶ, ಬಿಹಾರ, ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಸರ್ಕಾರಗಳನ್ನು ಉರುಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಸರಣಿ ಹಂತಕ ಅಲೆದಾಡುತ್ತಿದ್ದಾನೆ" ಎಂದು ಕೇಜ್ರಿವಾಲ್ ಸದನದಲ್ಲಿ ವಾಗ್ದಾಳಿ ನಡೆಸಿದರು.

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲ್, ಡೀಸೆಲ್, ಎಲ್ ಪಿಜಿ, ಹಾಲು, ಮೊಸರು ಎಲ್ಲದರ ಮೇಲೂ ಜಿಎಸ್ ಟಿ ವಿಧಿಸುತ್ತಿದ್ದಾರೆ. ಇದರಿಂದ ಬರುವ ಹಣ ಎರಡು ವಿಚಾರಗಳಿಗೆ ಬಳಸಲಾಗುತ್ತಿದೆ. ಒಂದು ಅವರ ಶ್ರೀಮಂತ ಉದ್ಯಮಿ ಸ್ನೇಹಿತರ ಸಾಲ ತೀರಿಸಲು ಮತ್ತು ಮತ್ತೊಂದು ಬೇರೆ ಪಕ್ಷಗಳ ಶಾಸಕರನ್ನು ಖರೀದಿಸಲು ಎಂದು ದೆಹಲಿ ಸಿಎಂ ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com