ಭಾರತ- ಬಾಂಗ್ಲಾ ಗಡಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರು ಬಿಎಸ್ಎಫ್ ಸಿಬ್ಬಂದಿ ಬಂಧನ

ಭಾರತದಿಂದ ಅಕ್ರಮವಾಗಿ ಬಾಂಗ್ಲಾದೇಶ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಇಬ್ಬರು ಬಿಎಸ್ ಎಫ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿ ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೊಲ್ಕತಾ: ಭಾರತದಿಂದ ಅಕ್ರಮವಾಗಿ ಬಾಂಗ್ಲಾದೇಶ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಇಬ್ಬರು ಬಿಎಸ್ ಎಫ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿ ಶನಿವಾರ ತಿಳಿಸಿದ್ದಾರೆ.

 ಬಿಎಸ್ ಎಫ್ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಮತ್ತು ಕಾನ್ಸ್ ಟೇಬಲ್ ನನ್ನು ಶುಕ್ರವಾರ ತಡರಾತ್ರಿ ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಪಶ್ಚಿಮ ಬಂಗಾಳ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ಅವರ ವಿರುದ್ಧ ವಿಚಾರಣೆ ನಡೆಸಲು ನ್ಯಾಯಾಲಯ ಆದೇಶಿಸಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿನ ಬೆಗ್ದಾ ಗಡಿ ಬಳಿ ಆಗಸ್ಟ್ 26 ರಂದು ಮುಂಜಾನೆ ಈ ಘಟನೆ ನಡೆದಿದೆ.  ಅಕ್ರಮವಾಗಿ ಭಾರತದಿಂದ ಬಾಂಗ್ಲಾದೇಶದೊಳಗೆ ನುಗ್ಗಲು ಪ್ರಯತ್ನಿಸುತ್ತಿದ್ದ ಮಹಿಳೆಯನ್ನು ಸಮೀಪದ ಹೊಲವೊಂದಕ್ಕೆ ಎಳೆದೊಯ್ದು ಬಿಎಸ್ ಎಫ್ ಕಾನ್ಸ್ ಟೇಬಲ್ ಅತ್ಯಾಚಾರ ನಡೆಸಿದ್ದಾನೆ. ಎಎಸ್ ಐ ಕೂಡಾ ಆತನಿಗೆ ನೆರವಾಗಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಮಹಿಳೆ ಪೊಲೀಸ್ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ತಿಳಿದ ನಂತರ ಇಬ್ಬರನ್ನು ಬಂಧಿಸಲಾಗಿದ್ದು, ಪೊಲೀಸರ ವಶಕ್ಕೆ ನೀಡಲಾಗಿದೆ. ಇಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಘಟನೆಗೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com