ಉತ್ತರ ಪ್ರದೇಶ: 12 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರು ಮಂದಿ, ಬಾಲಕಿ ಸ್ಥಿತಿ ಗಂಭೀರ

12 ವರ್ಷದ ಬಾಲಕಿಯನ್ನು ಅಪಹರಿಸಿ, ಆರು ಮಂದಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮೈನ್‌ಪುರಿ: 12 ವರ್ಷದ ಬಾಲಕಿಯನ್ನು ಅಪಹರಿಸಿ, ಆರು ಮಂದಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶುಕ್ರವಾರ ಈ ಘಟನೆ ನಡೆದಿದ್ದು, ಆರು ಮಂದಿ ಬಾಲಕಿಯನ್ನು ಅಪಹರಿಸಿ, ಹೊಲಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ನಡೆದಾಗ ಬಾಲಕಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇರೆಗೆ 25-27 ವರ್ಷ ವಯಸ್ಸಿನ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಸರ್ಕಲ್ ಅಧಿಕಾರಿ ಚಂದ್ರಕೇಶ್ ಸಿಂಗ್ ತಿಳಿಸಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com