ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, 30 ಜನರು ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,591 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,15,723 ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,591 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,15,723 ಏರಿಕೆಯಾಗಿದೆ. ಸದ್ಯ ಸಕ್ರಿಯ ಪ್ರಕರಣಗಳು ಕೂಡ 84,931ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 15 ಸಾವು ಸೇರಿದಂತೆ ಒಟ್ಟು 30 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,27,799 ಜನರು ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಚೇತರಿಕೆ ದರವು ಶೇ 98.62 ರಷ್ಟಿದ್ದರೆ, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.19 ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 4.58ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ಲಸಿಕೆ ಅಭಿಯಾನದ ಅಡಿಯಲ್ಲಿ 211.91 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com