ನವದೆಹಲಿ: ದೇಶದ ಮೊದಲ ವರ್ಚುಯಲ್ ಶಾಲೆ ಇಂದಿನಿಂದ ಆರಂಭ- ಅರವಿಂದ್ ಕೇಜ್ರಿವಾಲ್

ದೇಶದಲ್ಲಿನ ಪ್ರತಿಯೊಬ್ಬ ವಿದ್ಯಾರ್ಥಿಗೂ ಮೂಲ ಶಿಕ್ಷಣ ದೊರೆಯುವವರೆಗೂ ಭಾರತ ವಿಶ್ವದಲ್ಲಿ ನಂಬರ್ 1 ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ದೇಶದಲ್ಲಿನ ಪ್ರತಿಯೊಬ್ಬ ವಿದ್ಯಾರ್ಥಿಗೂ ಮೂಲ ಶಿಕ್ಷಣ ದೊರೆಯುವವರೆಗೂ ಭಾರತ ವಿಶ್ವದಲ್ಲಿ ನಂಬರ್ 1 ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ದೇಶದ ಮೊದಲ ವರ್ಚುಯಲ್ ಶಾಲೆ ಆರಂಭವಾಗುತ್ತಿರುವುದು ಕ್ರಾಂತಿಕಾರಿ ನಡೆಯಾಗಿದೆ ಎಂದು ಅವರು ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ದೆಹಲಿಯಲ್ಲಿ ಅನೇಕ ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದು ಕಡೆ ಶಾಲೆಗಳಲ್ಲಿ ಮೂಲಸೌಕರ್ಯಗಳು ಹೆಚ್ಚಾಗುತ್ತಿದೆ. ಇದರಿಂದಾಗಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಶಾಲಾ ಪಠ್ಯದಲ್ಲಿ ಕೌಶಲ್ಯ ತರಬೇತಿ ಸೇರಿದಂತೆ ಅನೇಕ ಹೊಸ ಹೊಸ ವಿಚಾರಗಳನ್ನು ಪರಿಚಯಿಸಲಾಗಿದೆ ಎಂದರು. 

ಇಂದು ನಾವು ದೇಶದ ಮೊದಲ ವರ್ಚುವಲ್ ಶಾಲೆ- ದೆಹಲಿ ಮಾಡೆಲ್ ವರ್ಚುವಲ್ ಸ್ಕೂಲ್  ಪ್ರಾರಂಭಿಸುತ್ತಿದ್ದೇವೆ, ಇದು ದೆಹಲಿ ಶಾಲಾ ಶಿಕ್ಷಣ ಮಂಡಳಿಯೊಂದಿಗೆ ಸಂಯೋಜಿತವಾಗಿದೆ. ಇಂದಿನಿಂದ 9ನೇ ತರಗತಿಗೆ ಪ್ರವೇಶಾತಿ ಅರ್ಜಿಗಳನ್ನು ಆಹ್ವಾನಿಸುತ್ತಿದ್ದೇವೆ. ದೇಶಾದ್ಯಂತದ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳು ಲೈವ್ ತರಗತಿಗಳಿಗೆ ಹಾಜರಾಗಬಹುದು ಮತ್ತು ದೆಹಲಿಯ ಮಾಡೆಲ್ ವರ್ಚುವಲ್ ಸ್ಕೂಲ್‌ನಲ್ಲಿ ರೆಕಾರ್ಡ್ ಮಾಡಲಾದ ತರಗತಿಗಳು ಮತ್ತು ಅಧ್ಯಯನ ಸಾಮಗ್ರಿಗಳ ಬಗ್ಗೆ ಲಭ್ಯವಿದೆ. ಇದರೊಂದಿಗೆ ಜೆಇಇ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ  ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತೇವೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com