ಜಾರ್ಖಂಡ್‌ನಲ್ಲಿ ನಕ್ಸಲರ ವಿರುದ್ಧ ಎನ್​ಕೌಂಟರ್: ಐವರು ಯೋಧರಿಗೆ ಗಾಯ

ಜಾರ್ಖಂಡ್‌ನ ಚೈಬಾಸಾದಲ್ಲಿ ಗುರುವಾರ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಐವರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಪಶ್ಚಿಮ ಸಿಂಗ್‌ಭೂಮ್ (ಜಾರ್ಖಂಡ್): ಜಾರ್ಖಂಡ್‌ನ ಚೈಬಾಸಾದಲ್ಲಿ ಗುರುವಾರ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಐವರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಎನ್ಕೌಂಟರ್ ನಡೆದ ಸ್ಥಳದಲ್ಲಿ ಗಾಯಗೊಂಡಿದ್ದ ಯೋಧರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸಂಜಯ್ ಆನಂದರಾವ್ ಲಾಠ್ಕರ್ ಮಾತನಾಡಿ, 'ಚೈಬಾಸಾದಲ್ಲಿ ಬೆಳಗ್ಗೆಯಿಂದ ನಕ್ಸಲರೊಂದಿಗೆ ಎರಡು ಬಾರಿ ಘರ್ಷಣೆ ನಡೆಯಿತು. ಇದರಲ್ಲಿ ನಮ್ಮ 5 ಕೋಬ್ರಾ ಸೈನಿಕರು ಗಾಯಗೊಂಡರು. ಅವರನ್ನು ಹೆಲಿಕಾಪ್ಟರ್ ಮೂಲಕ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ' ಎಂದು ಹೇಳಿದ್ದಾರೆ.

ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com