ದೆಹಲಿ ಮದ್ಯ ನೀತಿ ಪ್ರಕರಣ: ಕೆಸಿಆರ್ ಪುತ್ರಿಗೆ ಸಿಬಿಐ ನೊಟೀಸ್

ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಸಿಆರ್ ಪುತ್ರಿಗೆ ನೊಟೀಸ್ ಜಾರಿಗೊಳಿಸಿದೆ. 
ತೆಲಂಗಾಣ ಸಿಎಂ ಪುತ್ರಿ ಕವಿತಾ(ಸಂಗ್ರಹ ಚಿತ್ರ)
ತೆಲಂಗಾಣ ಸಿಎಂ ಪುತ್ರಿ ಕವಿತಾ(ಸಂಗ್ರಹ ಚಿತ್ರ)

ಹೈದರಾಬಾದ್: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಸಿಆರ್ ಪುತ್ರಿಗೆ ನೊಟೀಸ್ ಜಾರಿಗೊಳಿಸಿದೆ. 

ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ, ಸಿಎಂ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರ ಹೆಸರು ಮದ್ಯ ನೀತಿ ಹಗರಣದಲ್ಲಿ ತಳುಕಿಹಾಕಿಕೊಂಡಿತ್ತು.
 
ಡಿ.06 ರಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನಲ್ಲಿ ಸೂಚಿಸಲಾಗಿದೆ.

ಸಿಆರ್ ಪಿ ಸಿ ಸೆಕ್ಷನ್ 160 ಪ್ರಕಾರ, ಬೆಳಿಗ್ಗೆ 11 ಗಂಟೆ ವೇಳೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: 'ಬಿಜೆಪಿ ಸೇರಲು ಆ ಪಕ್ಷದ ನಾಯಕರು ಆಫರ್ ನೀಡಿದ್ದರು, ಆದರೆ...'; ತೆಲಂಗಾಣ ಸಿಎಂ ಕೆಸಿಆರ್ ಪುತ್ರಿ ಕವಿತಾ
 
ಕವಿತಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮನ್ನು ಹೈದರಾಬಾದ್ ನ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಬಹುದು ಎಂದು ಅಧಿಕಾರಿಗಳಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.
 
ಭ್ರಷ್ಟಾಚಾರ ನಿಗ್ರಹ ದಳದ ಡಿಎಸ್ ಪಿ ಅಲೋಕ್ ಕುಮಾರ್ ಶಾಹಿ ನೊಟೀಸ್ ಜಾರಿಗೊಳಿಸಿದ್ದು, 

ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್ ನಲ್ಲಿ ಸಲ್ಲಿಸಿರುವ ವರದಿಯಲ್ಲಿ ಕವಿತಾ ಅವರ ಹೆಸರು ಇತ್ತು. ಅಷ್ಟೇ ಅಲ್ಲದೇ ಕವಿತಾ ತಾವು ಯಾವುದೇ ತನಿಖೆಯನ್ನೂ ಎದುರಿಸುವುದಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com