ಎಬಿವಿಪಿ
ದೇಶ
ಅಹಮದಾಬಾದ್: 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಎಬಿವಿಪಿ ಕಾರ್ಯಕರ್ತರಿಂದ ಕಾಲೇಜು ಪ್ರಾಂಶುಪಾಲರಿಗೆ ಒತ್ತಾಯ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಧಿಕಾರಿಗಳು ಕಾಲೇಜು ಪ್ರಾಂಶುಪಾಲರೊಬ್ಬರಿಗೆ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.
ಅಹಮದಾಬಾದ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಧಿಕಾರಿಗಳು ಕಾಲೇಜು ಪ್ರಾಂಶುಪಾಲರೊಬ್ಬರಿಗೆ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.
ಗುಜರಾತ್ ಲಾ ಸೊಸೈಟಿ (ಜಿಎಲ್‌ಎಸ್) ವಿಶ್ವವಿದ್ಯಾಲಯದ ಅಹಮದಾಬಾದ್‌ನ ಎಚ್‌ಎ ಕಾಲೇಜಿನಲ್ಲಿ ಈ ಘಟನೆ ವರದಿಯಾಗಿದೆ.
ವರದಿ ಪ್ರಕಾರ, ಕೆಲವು ದಿನಗಳ ಹಿಂದೆ ತರಗತಿ ನಡೆಯುತ್ತಿರುವಾಗ ಕೆಲವು ವಿದ್ಯಾರ್ಥಿಗಳು 'ಜೈ ಶ್ರೀ ರಾಮ್' ಎಂದು ಘೋಷಣೆ ಮಾಡಲು ಪ್ರಾರಂಭಿಸಿದರು. ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಸಂಜಯ್ ವಕೀಲರ ಬಳಿ ಕರೆದೊಯ್ದರು. ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕ್ಷಮೆ ಯಾಚಿಸಿದರು.
ಈ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ಗೆ ಸೇರಿದ ಎಬಿವಿಪಿ ಕಾರ್ಯಕರ್ತರು ಮುಖ್ಯಶಿಕ್ಷಕರನ್ನು ಎದುರಿಸಿ 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ಒತ್ತಾಯಿಸಿದರು. ಕೆಲವು ದಿನಗಳ ಹಿಂದೆ ತರಗತಿಯಲ್ಲಿ ತೊಂದರೆ ಸೃಷ್ಟಿಸಿದ ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳುವಂತೆಯೂ ಒತ್ತಾಯಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ