ಸಂಸದ ಶಶಿ ತರೂರ್ ಸಮಸ್ಯೆ: ಕಾಂಗ್ರೆಸ್ ನಿರ್ವಹಿಸುತ್ತಿರುವ ರೀತಿಗೆ ಐಯುಎಂಎಲ್ ಅಸಮಾಧಾನ!

ಸಂಸದ ಶಶಿ ತರೂರ್ ಸಮಸ್ಯೆಯನ್ನು ಕಾಂಗ್ರೆಸ್ ನಿಭಾಯಿಸುತ್ತಿರುವ ರೀತಿಗೆ ಯುಡಿಎಫ್‌ನಲ್ಲಿ ಎರಡನೇ ಅತಿ ದೊಡ್ಡ ಮಿತ್ರ ಪಕ್ಷವಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಅಸಮಾಧಾನ ವ್ಯಕ್ತ ಪಡಿಸಿದೆ.
ಶಶಿ ತರೂರ್
ಶಶಿ ತರೂರ್
Updated on

ಮಲ್ಲಪ್ಪುರಂ: ಸಂಸದ ಶಶಿ ತರೂರ್ ಸಮಸ್ಯೆಯನ್ನು ಕಾಂಗ್ರೆಸ್ ನಿಭಾಯಿಸುತ್ತಿರುವ ರೀತಿಗೆ ಯುಡಿಎಫ್‌ನಲ್ಲಿ ಎರಡನೇ ಅತಿ ದೊಡ್ಡ ಮಿತ್ರ ಪಕ್ಷವಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಅಸಮಾಧಾನ ವ್ಯಕ್ತ ಪಡಿಸಿದೆ.

ಸೋಮವಾರದಿಂದ ವಿಧಾನಸಭಾ ಅಧಿವೇಶನ ಆರಂಭವಾಗಿದೆ, ಇದಕ್ಕು ಮುನ್ನ ಪಕ್ಷದ ರಾಜ್ಯ ಮುಖ್ಯಸ್ಥ ಪಾಣಕ್ಕಾಡ್ ಸಾದಿಕ್ ಅಲಿ ಶಿಹಾಬ್ ತಂಗಳ್ ಮಲಪ್ಪುರಂನಲ್ಲಿ ಭಾನುವಾರ ಕರೆದಿದ್ದ ಸಭೆಯಲ್ಲಿ ಐಯುಎಂಎಲ್ ಶಾಸಕರು ತಮ್ಮ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯನ್ನು ರಾಜ್ಯಪಾಲರನ್ನು ಕಿತ್ತುಹಾಕುವ ಉದ್ದೇಶಿತ ಮಸೂದೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವು ನಿರ್ಧರಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ತಿರುವನಂತಪುರಂ ಸಂಸದ ಶಶಿ ತರೂರ್ ರಾಜ್ಯ ಪ್ರವಾಸಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ತರೂರ್ ಅವರ ಮಲಬಾರ್ ಭೇಟಿಯ ಸಮಯದಲ್ಲಿ ಈ ಸಮಸ್ಯೆ ಕೊನೆಗೊಂಡಿತು ಎಂದು ಪಕ್ಷ ಭಾವಿಸಿತ್ತು.

ಸದ್ಯ ಅವರ ದಕ್ಷಿಣ ಕೇರಳ ಭೇಟಿಯ ಸಂದರ್ಭದಲ್ಲಿ ಇದೇ ರೀತಿಯ ಪರಿಸ್ಥಿತಿ ಉದ್ಭವಿಸಿದೆ. ತರೂರ್ ವಿರುದ್ಧದ ಹೋರಾಟವು ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಕುಗಳನ್ನು ತೋರಿಸುತ್ತಿದೆ. ಇದು ಯುಡಿಎಫ್‌ಗೆ ರಾಜ್ಯದಲ್ಲಿ ಅಧಿಕಾರವನ್ನು ಮರಳಿ ಪಡೆಯಲು ಸಹಾಯ ಮಾಡುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಲಬಾರ್ ಭೇಟಿಯ ಸಂದರ್ಭದಲ್ಲಿ ತರೂರ್ ಅವರು ಸಾದಿಕ್ ಅಲಿ ಶಿಹಾಬ್ ತಂಗಲ್ ಅವರ ನಿವಾಸದಲ್ಲಿ ಐಯುಎಂಎಲ್ ನಾಯಕರನ್ನು ಭೇಟಿ ಮಾಡಿದರು. IUML ನಾಯಕರು ರಾಜ್ಯದಲ್ಲಿ ತರೂರ್ ಅವರ ಕಾರ್ಯಕ್ರಮಗಳಿಗೆ ಬೆಂಬಲವನ್ನು ನೀಡಿದ್ದರು.

ಪಕ್ಷವು ವಿಜಿಂಜಂ ಬಂದರಿಗೆ ವಿರುದ್ಧವಾಗಿಲ್ಲ ಎಂದು ಮಲಪ್ಪುರಂನ ಐಯುಎಂಎಲ್ ಶಾಸಕರೊಬ್ಬರು ತಿಳಿಸಿದ್ದಾರೆ. ಯುಡಿಎಫ್ ಸರ್ಕಾರದ ಅವಧಿಯಲ್ಲಿ ಯೋಜನೆ ಆರಂಭಿಸಿದ್ದರಿಂದ ನಾವು ಈ ಯೋಜನೆಯನ್ನು ವಿರೋಧಿಸುತ್ತಿಲ್ಲ, ಐಯುಎಂಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ಎಂ ಎ ಸಲಾಂ ಮಾತನಾಡಿ, ವಿಝಿಂಜಂ ಪ್ರತಿಭಟನಾಕಾರರ ಬೇಡಿಕೆಗಳನ್ನೂ ಸರ್ಕಾರ ಪರಿಗಣಿಸಬೇಕು. ಪ್ರತಿಭಟನೆಯನ್ನು ಹತ್ತಿಕ್ಕುವ ಮೂಲಕ ಸರ್ಕಾರ ಯೋಜನೆಯನ್ನು ಪೂರ್ಣಗೊಳಿಸುವುದನ್ನು ನಾವು ನೋಡಲು ಬಯಸುವುದಿಲ್ಲ ಎಂದು ಅವರು ಹೇಳಿದರು.

ವಿಧಾನಸಭೆ ಅಧಿವೇಶನಕ್ಕೂ ಮುನ್ನ ನಡೆಯುವ ಯುಡಿಎಫ್ ಸಂಸದೀಯ ಸದಸ್ಯರ ಸಭೆಯಲ್ಲಿ ಲೀಗ್ ಶಾಸಕರು ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವನ್ನು ಮಂಡಿಸಲಿದ್ದಾರೆ ಎಂದು ಸಲಾಂ ಹೇಳಿದರು. ರಾಜ್ಯಪಾಲರ ಕುಲಪತಿ ಹುದ್ದೆಯನ್ನು ಕಿತ್ತೊಗೆಯಲು ವಿಧಾನಸಭೆಯಲ್ಲಿ ಮಂಡಿಸಲಿರುವ ಸುಗ್ರೀವಾಜ್ಞೆ ಕುರಿತು ತೆಗೆದುಕೊಳ್ಳಬೇಕಾದ ನಿಲುವು, ಯುಡಿಎಫ್ ಸಭೆಯಲ್ಲೂ ಬಹಿರಂಗವಾಗಲಿದೆ ಎಂದು ಸಲಾಂ ಹೇಳಿದರು.

ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಕ್ರಮಕ್ಕೆ ಐಯುಎಂಎಲ್ ಭಿನ್ನವಾದ ನಿಲುವನ್ನು ತೆಗೆದುಕೊಂಡಿತು. ಪ್ರತಿಪಕ್ಷದ ನಾಯಕ ವಿ ಡಿ ಸತೀಶನ್ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ರಾಜ್ಯಪಾಲರ ಕ್ರಮವನ್ನು ಸ್ವಾಗತಿಸಿದರೆ, ಐಯುಎಂಎಲ್ ನಾಯಕ ಪಿ ಕೆ ಕುನ್ಹಾಲಿಕುಟ್ಟಿ ಕ್ರಮ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com