ಡಾ. ಬಿ.ಆರ್.ಅಂಬೇಡ್ಕರ್ ಪುಣ್ಯಸ್ಮರಣೆ: ರಾಷ್ಟ್ರಪತಿ, ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಗೌರವ ನಮನ

ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದೇಶದ ಅನೇಕ ಗಣ್ಯರು ಮಂಗಳವಾರ ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದೇಶದ ಅನೇಕ ಗಣ್ಯರು ಮಂಗಳವಾರ ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.
 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಮಹಾಪರಿನಿರ್ವಾಣ ದಿವಸದಂದು, ನಾನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಮತ್ತು ನಮ್ಮ ದೇಶಕ್ಕಾಗಿನ ಅವರ ಸೇವೆಗಳನ್ನು ಸ್ಮರಿಸಿತ್ತೇನೆಂದು ಹೇಳಿದ್ದಾರೆ.

ಅಂಬೇಡ್ಕರ್ ಅವರ ಹೋರಾಟಗಳು ಲಕ್ಷಾಂತರ ಜನರ ಪಾಲಿಗೆ ಆಶಾಕಿರಣವಾಗಿತ್ತು. ಭಾರತದ ಸಂವಿಧಾನ ರಚನೆ ನಿಟ್ಟಿನಲ್ಲಿ ಅವರ ಪ್ರಯತ್ನಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದಿದ್ದಾರೆ.

ಇದೇ ವೇಳೆ ರಾಷ್ಟ್ರಪತಿ, ಉಪರಾಷ್ಟ್ರಪತಿಗಳೊಂದಿಗೆ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿರುವ ಚಿತ್ರವನ್ನು ಮೋದಿಯವರು ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಕೂಡ ಸಂವಿಧಾನ ಶಿಲ್ಪಿಗೆ ಗೌರವ ನಮನ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ.

ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಸದೃಢ, ಸಶಕ್ತ, ಸಮಾನತೆಯ ಭಾರತಕ್ಕಾಗಿ ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಸಂಕಲ್ಪವನ್ನು ಮಾಡೋಣ ಎಂದು ಬೊಮ್ಮಾಯಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕೂಡ ಟ್ವೀಟ್‌ ಮಾಡಿ, ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಹಾದಿಯನ್ನು ಮರೆಯದೆ, ನಮ್ಮೆಲ್ಲರ ವಿಚಾರ ಮತ್ತು ಆಚಾರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಮ್ಮೊಳಗೆ ಸದಾ ಜೀವಂತವಾಗಿರಿಸಿಕೊಂಡು, ನಮಗಾಗಿ ಅವರು ಕಂಡ ಕನಸುಗಳನ್ನು ನನಸು‌ ಮಾಡೋಣ ಎಂದಿದ್ದಾರೆ.

ಡಾ. ಬಿ.ಆರ್​.ಅಂಬೇಡ್ಕರ್​ ಅವರು 1981ರಲ್ಲಿ ಮಧ್ಯಪ್ರದೇಶದ ಮಾವೋದಲ್ಲಿ ಜನಿಸಿದರು. ಅಂಬೇಡ್ಕರ್​ ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯವರು. ಇವರು ಬಾಲ್ಯದಿಂದಲೂ ಅಸ್ಪೃಶ್ಯತೆ ಅನುಭವಿಸಿ, ನಂತರ ಅದರ ವಿರುದ್ಧ ಹೋರಾಟ ನಡೆಸಿದರು. ಅರ್ಥಶಾಸ್ತ್ರಜ್ಞ, ರಾಜಕಾರಣಿಯಾಗಿದ್ದರು. ಸಾಮಾಜಿಕ ತಾರತಮ್ಯದ ವಿರುದ್ಧ ಗಟ್ಟಿಯಾಗಿ ನಿಂತು, ಮಹಿಳೆಯರು-ಶ್ರಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದರು. ಇವರು 1956ರ ಡಿಸೆಂಬರ್​ 6ರಂದು ನಿಧನರಾಗಿದ್ದಾರೆ. ಡಾ.ಅಂಬೇಡ್ಕರ್​ ಅವರು ಬೌದ್ಧ ಧರ್ಮಾನುಯಾಯಿ ಆಗಿದ್ದರಿಂದ ಅವರ ಪುಣ್ಯ ತಿಥಿಯನ್ನು ಮಹಾಪರಿನಿರ್ವಾಣ ದಿನ ಎಂದು ಆಚರಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com