ಬಾಲಕನ ರಕ್ಷಣಾ ಕಾರ್ಯಾಚರಣೆ
ಬಾಲಕನ ರಕ್ಷಣಾ ಕಾರ್ಯಾಚರಣೆ

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಆರು ವರ್ಷದ ಬಾಲಕ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾತ್ರಿ 8:30 ರ ಸುಮಾರಿಗೆ ಆರು ವರ್ಷದ ಬಾಲಕ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

ಭೂಪಾಲ್​: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾತ್ರಿ 8:30 ರ ಸುಮಾರಿಗೆ ಆರು ವರ್ಷದ ಬಾಲಕ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಆಡಳಿತ ಮಂಡಳಿಗೆ ಮಾಹಿತಿ ನೀಡಲಾಗಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಮಗುವಿನ ಚಲನವಲನದ ಮೇಲೆ ನಿಗಾ ಇಡಲು ಬೋರ್‌ವೆಲ್‌ಗೆ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಬೆತುಲ್ ಜಿಲ್ಲಾಧಿಕಾರಿ ಅಮನ್‌ವೀರ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಬೋರ್‌ವೆಲ್‌ನಲ್ಲಿ ಆಮ್ಲಜನಕ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ಜೆಸಿಬಿ ಯಂತ್ರಗಳ ಸಹಾಯದಿಂದ ಬೋರ್‌ವೆಲ್‌ಗೆ ಸಮಾನಾಂತರವಾಗಿ ಸುರಂಗ ತೋಡಲಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ಪಿ ಸಿಮಲಾ ಪ್ರಸಾದ್ ಇತರ ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ.

ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸುತ್ತಿದ್ದು, ಜಿಲ್ಲಾಧಿಕಾರಿಯಿಂದ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಕೊಳವೆ ಬಾವಿಯ ಸುಮಾರು 60 ಅಡಿ ಆಳದಲ್ಲಿ ಬಾಲಕ ಸಿಲುಕಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕ ಬದುಕಿ ಬರಲೆಂದು ಮಧ್ಯ ಪ್ರದೇಶದ ಜನರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com