ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ (Delhi Municipal Election Results) ಪ್ರಕಟಗೊಂಡಿದ್ದು, ಮೊದಲ ಬಾರಿಗೆ ಆಪ್‌ (AAP) ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ (BJP) ಆಡಳಿತ ಅಂತ್ಯಗೊಂಡಿದೆ.
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ
Updated on

ನವದೆಹಲಿ: ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ (Delhi Municipal Election Results) ಪ್ರಕಟಗೊಂಡಿದ್ದು, ಮೊದಲ ಬಾರಿಗೆ ಆಪ್‌ (AAP) ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ (BJP) ಆಡಳಿತ ಅಂತ್ಯಗೊಂಡಿದೆ.

ಹೌದು.. ತೀವ್ರ ಕುತೂಹಲ ಕೆರೆಳಿಸಿದ್ದ ಎಂಸಿಡಿ ಚುನಾವಣೆಯಲ್ಲಿ ಬಿಜೆಪಿ ಪೈಪೋಟಿಯ ಹೊರತಾಗಿಯೂ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಆಮ್ ಆದ್ಮಿ ಪಕ್ಷ ಯಶಸ್ವಿಯಾಗಿದ್ದು, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಅಧಿಕಾರಕ್ಕೇರಿದೆ. ಆ ಮೂಲಕ ದೆಹಲಿಯಲ್ಲಿ 15 ವರ್ಷಗಳ ಬಿಜೆಪಿ(BJP) ಆಡಳಿತ ಅಂತ್ಯಗೊಂಡಿದೆ. ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್‌ ಮಧ್ಯೆ ನೇರಾನೇರ ಸ್ಪರ್ಧೆ ಇತ್ತು. ಬಳಿಕ ಆಪ್‌ ಮುನ್ನಡೆಯನ್ನು ಕಾಯ್ದುಕೊಂಡಿತು. 

ದೆಹಲಿಯ 250 ವಾರ್ಡ್ ಗಳ ಪೈಕಿ ಆಮ್ ಆದ್ಮಿ ಪಕ್ಷ 136 ವಾರ್ಡ್ ಗಳಲ್ಲಿ ಜಯಭೇರಿ ಭಾರಿಸಿದ್ದು, ಬಹುಮತಕ್ಕೆ ಅಗತ್ಯವಿರುವ 126 ಸ್ಥಾನಗಳನ್ನು ಮೀರಿ ಇನ್ನೂ 10 ಹೆಚ್ಚುವರಿ ಸ್ಥಾನಗಳೊಂದಿಗೆ ಆಪ್ ಅಧಿಕಾರದ ಗದ್ದುಗೆ ಹಿಡಿದಿದೆ. ಆದರೆ ಆಡಳಿತಾರೂಢ ಬಿಜೆಪಿ 90 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇನ್ನೂ 10ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ   . ಇದರ ಗಳಿಕೆ 105ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉಳಿದಂತೆ ಕಾಂಗ್ರೆಸ್ 9 ಮತ್ತು ಪಕ್ಷೇತರರು 4 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ ಎನ್ನಲಾಗಿದೆ. 

ದೆಹಲಿ ಎಂಸಿಡಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆಗಳು ಆಪ್‌ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ ಭವಿಷ್ಯ ನುಡಿದಿದ್ದವು. ಬಿಜೆಪಿ ಮೂರಂಕಿ ದಾಟುವುದಿಲ್ಲ ಎಂದು ಹೇಳಿದ್ದವು. ಆದರೆ ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಆಪ್‌ಗೆ ಪ್ರಬಲ ಸ್ಪರ್ಧೆ ನೀಡಿದೆ. 2007 ರಿಂದ ಬಿಜೆಪಿ ಪಾಲಿಕೆಯ ಅಧಿಕಾರದಲ್ಲಿದೆ. ಡಿಸೆಂಬರ್‌ 4 ರಂದು ಚುನಾವಣೆ ನಡೆದಿದ್ದು  250 ಸ್ಥಾನಗಳಿರುವ ಪಾಲಿಕೆಯಲ್ಲಿ ಬಹುಮತಕ್ಕೆ 126 ಸ್ಥಾನಗಳ ಅಗತ್ಯವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com