ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್‌ನಲ್ಲಿ ಮತ್ತೆ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ

ಗುಜರಾತ್ ಮತ್ತು ಹಿಮಾಚಲ ಪ್ರದೇಶ ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ದಾಖಲೆಯ ಗೆಲವು ಸಾಧಿಸಿದೆ.
ಭೂಪೇಂದ್ರ ಪಟೇಲ್
ಭೂಪೇಂದ್ರ ಪಟೇಲ್
Updated on

ಅಹಮದಾಬಾದ್/ಶಿಮ್ಲಾ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ದಾಖಲೆಯ ಗೆಲವು ಸಾಧಿಸಿದೆ.

1995 ರಿಂದ ಗುಜರಾತ್‌ನಲ್ಲಿ ಸತತ ಗೆಲುವು ಸಾಧಿಸುತ್ತಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ), ಇಂದು ಸತತ ಏಳನೇ ಅವಧಿಗೆ ಅಧಿಕಾರಕ್ಕೇರುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಹಿಂದಿನ ಕಾಂಗ್ರೆಸ್ ದಾಖಲೆಯನ್ನು ಧೂಳಿಪಟ ಮಾಡಿದೆ. 1985ರಲ್ಲಿ ಮಾಧವಸಿಂಹ ಸೋಲಂಕಿ ನೇತೃತ್ವದಲ್ಲಿ ಕಾಂಗ್ರೆಸ್‌ನ 149 ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ಸೃಷ್ಟಿಸಿತ್ತು.

ಗುಜರಾತ್​ನಲ್ಲಿ ಬಿಜೆಪಿಗೆ ಪ್ರಬಲ ಪ್ರತಿರೋಧ ಒಡ್ಡಬಹುದು ಎಂದು ನಿರೀಕ್ಷಿಸಿದ್ದ ಆಮ್ ಆದ್ಮಿ ಪಕ್ಷ ಕೇವಲ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿ ಪ್ರತಿಪಕ್ಷ ಕಾಂಗ್ರೆಸ್ ಕೇವಲ 17 ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲು ಅನುಭವಿಸಿದೆ.

ಇನ್ನು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಸ್ಪಷ್ಟ ಬಹುಮತ ಪಡೆದಿದ್ದು, ಸರ್ಕಾರ ರಚಿಸುವ ಉತ್ಸಾಹದಲ್ಲಿದೆ. ತನ್ನ ಶಾಸಕರಿಗೆ ಆಪರೇಷನ್ ಕಮಲದ ಗಾಳ ಹಾಕಬಹುದು ಎಂಬ ಕಾರಣಕ್ಕೆ ಎಲ್ಲ ಶಾಸಕರಿಗೂ ಚಂಡೀಗಢಕ್ಕೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ. 

ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಅಧಿಕಾರಕ್ಕೆ ಬರಲು ಯಾವುದೇ ಪಕ್ಷಕ್ಕೆ 35 ಸದಸ್ಯ ಬಲದ ಅಗತ್ಯವಿದೆ. ಕಾಂಗ್ರೆಸ್ 40, ಬಿಜೆಪಿ 25 ಸ್ಥಾನಗಳನ್ನು ಪಡೆದರೆ, ಮೂವರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com