ರಾಂಪುರ: ಉತ್ತರ ಪ್ರದೇಶದ ರಾಂಪುರ ಸದರ್ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಭದ್ರಕೋಟೆ ಬೇಧಿಸಿದ ಆಡಳಿತರೂಢ ಬಿಜೆಪಿ ಮೊದಲ ಬಾರಿ ಗೆಲುವು ಸಾಧಿಸಿದೆ.
ಬಿಜೆಪಿ ಅಭ್ಯರ್ಥಿ ಆಕಾಶ್ ಸಕ್ಸೇನಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅಸಿಮ್ ರಾಜಾ ವಿರುದ್ಧ ಗೆಲುವು ಸಾಧಿಸಿದ್ದಾರೆ.
33,702 ಮತಗಳ ಅಂತರದಿಂದ ಗೆದ್ದಿರುವ ಆಕಾಶ್ ಸಕ್ಸೇನಾ ಅವರಿಗೆ ಚುನಾವಣಾಧಿಕಾರಿಗಳು ಗೆಲುವಿನ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದ್ದಾರೆ.
ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ನಂತರ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆದಿತ್ತು.
Advertisement