ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಲ್ಲಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಮೊದಲ ಗೆಲುವು: ಭೂಪೇಶ್ ಬಘೇಲ್

ಮಲ್ಲಿಕಾರ್ಜನ ಖರ್ಗೆ ಅವರ ನಾಯಕತ್ವದಡಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಮೊದಲ ಗೆಲುವು ಸಿಕ್ಕಿದೆ ಎಂದು  ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.
ಭೂಪೇಶ್ ಭಾಘೇಲ್
ಭೂಪೇಶ್ ಭಾಘೇಲ್

ಶಿಮ್ಲಾ: ಮಲ್ಲಿಕಾರ್ಜನ ಖರ್ಗೆ ಅವರ ನಾಯಕತ್ವದಡಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಮೊದಲ ಗೆಲುವು ಸಿಕ್ಕಿದೆ ಎಂದು  ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಇದು ಮೊದಲ ಗೆಲುವು ಆಗಿದೆ ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪ್ರಚಾರ ಕೂಡಾ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂದು ಅವರು ಹೇಳಿದರು.

ಇದು ಹಿಮಾಚಲ ಪ್ರದೇಶದ ಜನರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಗೆಲುವು ಆಗಿದೆ. ಪ್ರತಿಯೊಬ್ಬರು ಶ್ರಮ ಪಟ್ಟಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮುಖ ಪಾತ್ರ ವಹಿಸಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಆಶೀರ್ವಾದವೂ ಇದೆ ಎಂದರು. ಹಿಮಾಚಲ ಪ್ರದೇಶ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಮಧ್ಯಾಹ್ನ ಬಘೇಲ್ ಶಿಮ್ಲಾಗೆ ಆಗಮಿಸಿದ್ದು, ನೂತನ ಮುಖ್ಯಮಂತ್ರಿಯ ಆಯ್ಕೆ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಬಘೇಲ್ ಹೇಳಿದರು. ಯಾರನ್ನೂ ನಿರ್ಲಕ್ಷಿಸುವುದಿಲ್ಲ. ಪ್ರತಿಯೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಹೊಂದಿದ್ದಾರೆ. ಪಕ್ಷದ ಶಾಸಕಾಂಗ ಸಭೆ ನಡೆಸಿ, ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com