ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಸತತ 7ನೇ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಬಿ ಎಸ್ ಯಡಿಯೂರಪ್ಪ ಮತ್ತು ಅರ್ಜುನ್ ಮುಂಡಾ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಶುಕ್ರವಾರ ನೇಮಿಸಲಾಗಿದೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದೆ.
ಬಿಜೆಪಿ ಶನಿವಾರ ಬೆಳಗ್ಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರ ಸಭೆ ಕರೆದಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಭೂಪೇಂದ್ರ ಪಟೇಲ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ಈ ಹಿಂದೆಯೇ ಘೋಷಿಸಿದೆ.
Advertisement