ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಐಐಟಿ ಗುವಾಹಟಿ ಪ್ರಾಧ್ಯಾಪಕ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆ

ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ) ಪ್ರಾಧ್ಯಾಪಕರೊಬ್ಬರು ಶುಕ್ರವಾರ ಸಂಜೆ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
Published on

ಗುವಾಹಟಿ: ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ, ಗುವಾಹಟಿ) ಪ್ರಾಧ್ಯಾಪಕರೊಬ್ಬರು ಶುಕ್ರವಾರ ಸಂಜೆ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದು, ಮೃತರನ್ನು 47 ವರ್ಷದ  ಗಣಿತಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಎಂದು ಗುರುತಿಸಲಾಗಿದೆ.

“ಇಂದು ಸಂಜೆ ಐಐಟಿ ಗುವಾಹಟಿಯ ನಿವಾಸವೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇದನ್ನು ಸಂಸ್ಥೆಯ ಪ್ರಾಧ್ಯಾಪಕರು ಎಂದು ಗುರುತಿಸಲಾಗಿದೆ. ಮೃತರ ಕುಟುಂಬದೊಂದಿಗೆ ಸಂಪರ್ಕವನ್ನು ಸ್ಥಾಪಿಸಲು ಸಂಸ್ಥೆ ಪ್ರಯತ್ನಿಸುತ್ತಿದೆ ಎಂದು ಐಐಟಿ ಗುವಾಹಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾವಿಗೆ ಸಂತಾಪ ಸೂಚಿಸಿರುವ ಸಂಸ್ಥೆ, ಪೊಲೀಸ್ ತನಿಖೆಗೆ ಸಹಕರಿಸುವುದಾಗಿ ಹೇಳಿದೆ. ಅಲ್ಲದೆ ಆಂತರಿಕ ತನಿಖೆಯನ್ನು ನಡೆಸಲು ನಿರ್ಧರಿಸಿದೆ.

ಮೃತರ ಮನೆಯಿಂದ ದುರ್ವಾಸನೆ ಬರುತ್ತಿದೆ ಎಂದು ಅಕ್ಕಪಕ್ಕದವರು ದೂರು ನೀಡಿದ ನಂತರ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಅವರ ಮನೆಯ ಬಾಗಿಲು ಒಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com