ಉತ್ತರ ಪ್ರದೇಶ: ಪ್ರವಾಸದ ವೇಳೆ ಮತ್ತು ಬರಿಸುವ ಪದಾರ್ಥ ನೀಡಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ ಪ್ರಾಂಶುಪಾಲನಿಂದ ರೇಪ್!

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ನಾಚಿಕೆಗೇಡಿನ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಪ್ರವಾಸದಲ್ಲಿರುವ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಿನ್ಸಿಪಾಲ್ ಅತ್ಯಾಚಾರವೆಸಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೀರತ್: ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ನಾಚಿಕೆಗೇಡಿನ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಪ್ರವಾಸದಲ್ಲಿರುವ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಿನ್ಸಿಪಾಲ್ ಅತ್ಯಾಚಾರವೆಸಗಿದ್ದಾರೆ. ಮೀರತ್ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ ಅವರದೇ ಶಾಲೆಯಲ್ಲಿ ಓದುತ್ತಿರುವ 11ನೇ ತರಗತಿಯ ವಿದ್ಯಾರ್ಥಿಯೊಬ್ಬರು ದೂರು ದಾಖಲಿಸಿದ್ದಾರೆ.

ನವೆಂಬರ್ 23ರಂದು ಪ್ರಾಂಶುಪಾಲರು ಶಾಲೆಯ ಒಂಬತ್ತು ವಿದ್ಯಾರ್ಥಿಗಳನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು. ವಿದ್ಯಾರ್ಥಿನಿಯರಿಗೆ ವಸತಿಗಾಗಿ ಹೋಟೆಲ್‌ನಲ್ಲಿ ಎರಡು ಕೊಠಡಿಗಳನ್ನು ತೆಗೆದುಕೊಂಡಿದ್ದರು. ಒಂದು ಕೊಠಡಿಯಲ್ಲಿ ಎಂಟು ವಿದ್ಯಾರ್ಥಿಗಳು ಉಳಿದುಕೊಂಡಿದ್ದರೆ, ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲರು 11ನೇ ತರಗತಿ ವಿದ್ಯಾರ್ಥಿನಿ 17 ವರ್ಷದ ಬಾಲಕಿ ಉಳಿದುಕೊಂಡಿದ್ದರು ಎನ್ನಲಾಗಿದೆ.

ಈ ವೇಳೆ ಪ್ರಾಂಶುಪಾಲರು ವಿದ್ಯಾರ್ಥಿನಿಯ ಆಹಾರದಲ್ಲಿ ಮಾದಕ ವಸ್ತುವನ್ನು ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ, ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡುವ ಬೆದರಿಕೆ ಹಾಕಿದ್ದು ಅಲ್ಲದೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದನು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ನವೆಂಬರ್ 24ರಂದು ತಮ್ಮ ಮನೆಗೆ ಮರಳಿದರು. ಆರಂಭದಲ್ಲಿ, ಬಾಲಕಿ ಘಟನೆಯ ಬಗ್ಗೆ ಮೌನವಾಗಿದ್ದಳು ಆದರೆ ನಂತರ ಘಟನೆಗಳ ಸಂಪೂರ್ಣ ಮಾಹಿತಿಯನ್ನು ತನ್ನ ಕುಟುಂಬ ಸದಸ್ಯರಿಗೆ ವಿವರಿಸಿದಳು ಎಂದು ಅವರು ಹೇಳಿದರು.

ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಾಂಶುಪಾಲರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸದ್ಯ ನಾಪತ್ತೆಯಾಗಿರುವ ಪ್ರಾಂಶುಪಾಲರನ್ನು ಹಿಡಿಯಲು ಮುಂದಾಗಿದ್ದೇವೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com