ವೈಎಸ್ ಶರ್ಮಿಳಾ 'ಅನಿರ್ದಿಷ್ಟಾವಧಿ ಉಪವಾಸಕ್ಕೆ ಬ್ರೇಕ್ ಹಾಕಿದ ಪೊಲೀಸರು, ಆಸ್ಪತ್ರೆಗೆ ಸ್ಥಳಾಂತರ

ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ಅನುಮತಿ ನಿರಾಕರಣೆ ಆರೋಪದ ಹಿನ್ನೆಲೆಯಲ್ಲಿ  ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರ ಅನಿರ್ದಿಷ್ಟಾವಧಿ ಉಪವಾಸಕ್ಕೆ ಪೊಲೀಸರು ಬ್ರೇಕ್ ಹಾಕಿದ್ದು, ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 
ಆಸ್ಪತ್ರೆಯಲ್ಲಿ ಶರ್ಮಿಳಾ
ಆಸ್ಪತ್ರೆಯಲ್ಲಿ ಶರ್ಮಿಳಾ

ಹೈದ್ರಾಬಾದ್:  ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ಅನುಮತಿ ನಿರಾಕರಣೆ ಆರೋಪದ ಹಿನ್ನೆಲೆಯಲ್ಲಿ  ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರ ಅನಿರ್ದಿಷ್ಟಾವಧಿ ಉಪವಾಸಕ್ಕೆ ಪೊಲೀಸರು ಬ್ರೇಕ್ ಹಾಕಿದ್ದು, ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಶರ್ಮಿಳಾ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. 

ಇಲ್ಲಿಂದ ಮಾಧ್ಯಮ ಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಲವಂತದಿಂದ ಕಳುಹಿಸಿದ ನಂತರ ಆಕೆಯನ್ನು ಮುಂಜಾನೆ 1 ಗಂಟೆ ಸುಮಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪಕ್ಷ ಹೇಳಿದೆ. ಶರ್ಮಿಳಾ ನೀರು ಸಹ ಕುಡಿದಿಲ್ಲ, ಇದರಿಂದಾಗಿ ಆಕೆಯ ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಪಕ್ಷ ತಿಳಿಸಿದೆ. 

ಶರ್ಮಿಳಾ ಅವರ ರಕ್ತದೊತ್ತಡ ಮತ್ತು ಗ್ಲೂಕೊಸ್ ಮಟ್ಟ ಎಚ್ಟರಿಕೆಯ ಮಟ್ಟಕ್ಕೆ ತಲುಪಿದೆ. ನಿರ್ಜಲೀಕರಣದಿಂದ ಆಕೆಯ ಕಿಡ್ನಿಗೆ ಸಮಸ್ಯೆಯಾಗುವ ಸಾಧ್ಯತೆಯಿರುವುದಾಗಿ ಆಕೆಯನ್ನು ನೋಡಿಕೊಳ್ಳುತ್ತಿರುವ ವೈದ್ಯರು ಹೇಳಿರುವುದಾಗಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಅವಿಭಜಿತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿರುವ ಶರ್ಮಿಳಾ, ಪಾದಯಾತ್ರೆಗೆ ಅನುಮತಿ ನಿರಾಕರಣೆ ವಿರುದ್ಧ ಶುಕ್ರವಾರ ಹುಸೇನ್ ಸಾಗರ್ ಕೆರೆ ಬಳಿಯ ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಪ್ರತಿಭಟನೆ ಆರಂಭಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com