ಉಮರ್ ಖಾಲಿದ್
ದೇಶ
ಸಹೋದರಿ ಮದುವೆಯಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ ಗೆ ಮಧ್ಯಂತರ ಜಾಮೀನು
2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ತನ್ನ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯ ಸೋಮವಾರ...
ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ತನ್ನ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯ ಸೋಮವಾರ ಏಳು ದಿನಗಳ ಮಧ್ಯಂತರ ಜಾಮೀನು ನೀಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಖಾಲಿದ್ ಅವರಿಗೆ ಡಿಸೆಂಬರ್ 23 ರಿಂದ ಡಿಸೆಂಬರ್ 30 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.
ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ಎರಡು ವರ್ಷಗಳ ಹಿಂದೆ ಬಂಧನಕ್ಕೊಳಗಾದ ನಂತರ ಉಮರ್ ಖಾಲಿದ್ ತಿಹಾರ್ ಜೈಲಿನಿಂದ ಮೊದಲ ಬಾರಿಗೆ ಹೊರ ಬರುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ