ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಡಿಢೀರ್ ಭೇಟಿ, ಪರಿಶೀಲನೆ

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಜ್ಯೋತಿರಾಧಿತ್ಯ ಸಿಂಧಿಯಾ
ಜ್ಯೋತಿರಾಧಿತ್ಯ ಸಿಂಧಿಯಾ

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

 ವಿಮಾನ ನಿಲ್ದಾಣದ ಟರ್ಮಿನಲ್ 3ಕ್ಕೆ ಭೇಟಿ ನೀಡಿದ ಸಚಿವರು, ಜನದಟ್ಟಣೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ನಂತರ ಪ್ರಯಾಣಿಕರು ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಿಂಧಿಯಾ ಸಂವಾದ ನಡೆಸಿದರು. ಇವರಿಗೆ ಸಚಿವಾಲಯದ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇತ್ತೀಚಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉದ್ದನೆಯ ಕ್ಯೂ ಇರುತ್ತದೆ ಮತ್ತು ಧೀರ್ಘಕಾಲ ಕಾಯಬೇಕಾಗುತ್ತದೆ ಎಂಬ ದೂರುಗಳು ಪ್ರಯಾಣಿಕರಿಂದ ಕೇಳಿಬಂದಿತ್ತು. ದೇಶದ ಅತಿದೊಡ್ಡ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಇಂದಿರಾಗಾಂಧಿ ವಿಮಾನ ನಿಲ್ದಾಣ ಮೂರು ಟರ್ಮಿನಲ್ ಗಳನ್ನು ಹೊಂದಿದೆ.

ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಮತ್ತು ಕೆಲ ದೇಶಿಯ ವಿಮಾನಗಳು ಟರ್ಮಿನಲ್ 3 ರಿಂದ ಹಾರಾಟ ನಡೆಸುತ್ತವೆ. ಇದು ಪ್ರತಿದಿನ ಸರಾಸರಿ ಸುಮಾರು 1.90 ಲಕ್ಷ ಪ್ರಯಾಣಿಕರು ಮತ್ತು 1,200 ವಿಮಾನಗಳನ್ನು ನಿರ್ವಹಿಸುತ್ತದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com