ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ನೆರೆ ಮನೆಯ ಮಹಿಳೆಯ ಹತ್ಯೆ!

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ನೆರೆ ಮನೆಯ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 
ಹತ್ಯೆ (ಸಾಂಕೇತಿಕ ಚಿತ್ರ)
ಹತ್ಯೆ (ಸಾಂಕೇತಿಕ ಚಿತ್ರ)
Updated on: 

ಮುಂಬೈ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ನೆರೆ ಮನೆಯ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 

ಡೊಂಬಿವಿಲಿ ಪ್ರದೇಶದಲ್ಲಿ ಈ ಅಪರಾಧ ಕೃತ್ಯ ವರದಿಯಾಗಿದ್ದು,  ವೈಶಾಲಿ ಮಸೂದ್ ಸಂತ್ರಸ್ತ ಮಹಿಳೆಯಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾನ್ಪಾಡಾ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರ್ಧರ್ಮೀಯ ವಿವಾಹ ಮಾಹಿತಿ ಸಂಗ್ರಹಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಸಮಿತಿ ರಚನೆ: ಶ್ರದ್ಧಾ ರೀತಿಯ ಪ್ರಕರಣಗಳ ತಡೆಗೆ ಈ ಕ್ರಮ ಎಂದ ಸರ್ಕಾರ
 
ಆರೋಪಿ ವೈಶಾಲಿ ಮಸೂದ್ ಅವರಿಂದ ಆಗಾಗ್ಗೆ ಹಣ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಬುಧವಾರ (ಡಿ.14 ರಂದು)  ವೈಶಾಲಿ ಹಣ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com