ಕಾಂಗ್ರೆಸ್ ಅನ್ನು ಅಂಡರ್ ಎಸ್ಟಿಮೇಟ್ ಮಾಡಬೇಡಿ, ಬಿಜೆಪಿ ಸೋಲಿಸಲು 'ಕೈ'ಯಿಂದ ಮಾತ್ರ ಸಾಧ್ಯ: ರಾಹುಲ್

ಕಾಂಗ್ರೆಸ್ ಪಕ್ಷದ ಬಗ್ಗೆ ಯಾರೂ ಅಂಡರ್ ಎಸ್ಟಿಮೇಟ್ ಮಾಡಬಾರದು. ಕಾಂಗ್ರೆಸ್ ಸೈದ್ಧಾಂತಿಕವಾಗಿ ನಡೆಯುತ್ತಿರುವ ಪಕ್ಷ. ಫ್ಯಾಸಿಸ್ಟ್ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್...
ರಾಜಸ್ಥಾನದಲ್ಲಿ ರಾಹುಲ್ ಗಾಂಧಿ
ರಾಜಸ್ಥಾನದಲ್ಲಿ ರಾಹುಲ್ ಗಾಂಧಿ

ಜೈಪುರ: ಕಾಂಗ್ರೆಸ್ ಪಕ್ಷದ ಬಗ್ಗೆ ಯಾರೂ ಅಂಡರ್ ಎಸ್ಟಿಮೇಟ್ ಮಾಡಬಾರದು. ಕಾಂಗ್ರೆಸ್ ಸೈದ್ಧಾಂತಿಕವಾಗಿ ನಡೆಯುತ್ತಿರುವ ಪಕ್ಷ. ಫ್ಯಾಸಿಸ್ಟ್ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಪಕ್ಷದ ಭಾರತ್ ಜೋಡೋ ಯಾತ್ರೆ ಇಂದು 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ವಿರುದ್ಧ ಹೋರಾಡಲು ಸಿದ್ಧವಿಲ್ಲದವರು ಮತ್ತು ಭ್ರಷ್ಟರು ಎಂಬ ಕಾರಣಕ್ಕೆ ಒತ್ತಡಕ್ಕೆ ಮಣಿಯುವವರು ಕಾಂಗ್ರೆಸ್‌ಗೆ ಅಗತ್ಯವಿಲ್ಲ ಎಂದು ಪಕ್ಷ ತೊರೆಯಲು ಬಯಸುವವರಿಗೆ ಬಾಗಿಲು ತೆರೆದಿದೆ ಎಂದಿದ್ದಾರೆ.

"ಬಹಳಷ್ಟು ಜನ ಕಾಂಗ್ರೆಸ್ ಪಕ್ಷ ಕಥೆ ಮುಗಿದುಹೋಗಿದೆ ಎಂದು ಭಾವಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಮುಗಿಸಲು ಸಾಧ್ಯವಿಲ್ಲ ಎಂದು ನಾನು ಹೇಳಬಲ್ಲೆ ಮತ್ತು ಬಿಜೆಪಿಯನ್ನು ಅಧಿಕಾರದಿಂದ ಕಾಂಗ್ರೆಸ್ ಪಕ್ಷವೇ ಕಿತ್ತೊಗೆಯಲಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಅನ್ನು ಯಾರೂ ಕಡಿಮೆ ಅಂದಾಜು ಮಾಡಬಾರದು ಎಂದು ಹೇಳಿದ ರಾಹುಲ್ ಗಾಂಧಿ, ಲಕ್ಷಾಂತರ ಮತ್ತು ಕೋಟ್ಯಾಂತರ ಪಕ್ಷದ ಕಾರ್ಯಕರ್ತರೇ ಪಕ್ಷದ ಶಕ್ತಿ ಮತ್ತು "ನಾವು ನಮ್ಮ ಕಾರ್ಯಕರ್ತರನ್ನು ಚೆನ್ನಾಗಿ ಬಳಸಿಕೊಂಡರೆ ಮುಂದಿನ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ" ಎಂದರು.

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ತೊರೆಯುತ್ತಿರುವ ನಾಯಕರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್, ಇತ್ತೀಚೆಗೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

"ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆಯಲು ಬಯಸಿದರೆ, ಬಿಜೆಪಿಯನ್ನು ಎದುರಿಸಲು ಧೈರ್ಯವಿಲ್ಲದಿದ್ದರೆ, ಅವರು ಪಕ್ಷವನ್ನು ತೊರೆಯಬಹುದು. ನಮಗೆ ಅವರು ಬೇಡ, ನಮಗೆ ಕಾಂಗ್ರೆಸ್ ಪಕ್ಷವನ್ನು, ಸಿದ್ಧಾಂತವನ್ನು ನಂಬುವವರು ಬೇಕು. ಬಿಜೆಪಿ ಫ್ಯಾಸಿಸ್ಟ್ ಪಕ್ಷ ಎಂದು ರಾಹುಲ್ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com